ಬೆಂಗಳೂರು : ಆಭರಣ ಪ್ರಿಯರಿಗೆ ಬಿಗ್ ಶಾಕ್, ಚಿನ್ನದ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ ಬರೋಬ್ಬರಿ 85,300 ರೂ. ತಲುಪಿದೆ.
ಹೌದು, ಚಿನ್ನದ ದರವು 10 ಗ್ರಾಂಗೆ (ಶೇ 99.9 ಪರಿಶುದ್ಧತೆ) 400 ರೂ. ಹೆಚ್ಚಳವಾಗಿ, 85,300ಗೆ ಮಾರಾಟವಾಗಿದೆ. ಸ್ಟ್ಯಾಂಡರ್ಡ್ ಚಿನ್ನದ ಬೆಲೆಯು ಇಷ್ಟೇ ಪ್ರಮಾಣದಲ್ಲಿ ಏರಿಕೆಯಾಗಿ, 84,900 ಮಾರಾಟವಾಗಿ ದಾಖಲೆ ಬರೆದಿದೆ.
ಇನ್ನು ಬೆಳ್ಳಿ ಬೆಲೆಯಲ್ಲೂ ಹೆಚ್ಚಳವಾಗಿದ್ದು, ಕೆ.ಜಿಗೆ 300 ಏರಿಕೆಯಾಗಿ, 96 ಸಾವಿರ ಆಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.