ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 12 ರಿಂದ ಎರಡು ದಿನಗಳ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ.
ಪ್ಯಾರಿಸ್ಗೆ ಎರಡು ದಿನಗಳ ಭೇಟಿಯನ್ನು ಮುಗಿಸಿದ ನಂತರ ಪ್ರಧಾನಿ ಮೋದಿ ವಾಷಿಂಗ್ಟನ್ ಡಿಸಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಟ್ರಂಪ್ ಅವರು ಅಮೆರಿಕದ ಅಧ್ಯಕ್ಷರಾಗಿ ಎರಡನೇ ಅವಧಿಯನ್ನು ಪ್ರಾರಂಭಿಸಿದ ನಂತರ ಇದು ಅವರ ಮೊದಲ ಅಧಿಕೃತ ಭೇಟಿಯಾಗಿದೆ