ಕಲಬುರ್ಗಿ : ಇತ್ತೀಚೆಗೆ ಬೆಂಗಳೂರಿನ ಹಲವು ಶಾಲೆಗಳಿಗೆ ನಿರಂತರವಾಗಿ ಬೆದರಿಕೆ ಸಂದೇಶ ಬಂದಿದ್ದ ಪ್ರಕರಣ ನಡೆದಿತ್ತು. ಇದೀಗ ಕಲಬುರ್ಗಿಯ MLC ಬಿಜಿ ಪಾಟೀಲ್ ಒಡೆತನದ ಖಾಸಗಿ ಶಾಲೆ ಒಂದಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಹೌದು ಕಲ್ಬುರ್ಗಿಯ ಕರುಣೆಶ್ವರ ನಗರದ ಶಾಲೆಗೆ ಬಾಂಬ್ ಬೆದರಿಕೆ ಈ ಮೇಲೆ ಸಂದೇಶವನ್ನು ಬಂದಿದೆ ತಮಿಳುನಾಡಿನಿಂದ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ ಎಂದು ತಿಳಿದು ಬಂದಿದೆ. ಮಧ್ಯಾಹ್ನ ಒಂದು ಗಂಟೆಗೆ ಬಾಂಬ್ ಸ್ಪೋಟಿಸುವುದಾಗಿ ಈ ಒಂದು ಬೆದರಿಕೆ ಸಂದೇಶ ಬಂದಿದೆ.
ಬೆದರಿಕೆ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲಾ ಆಡಳಿತ ಮಂಡಳಿ ಮಕ್ಕಳನ್ನು ಮನೆಗೆ ಕಳುಹಿಸಿದೆ. ಕೂಡಲೇ ಶಾಲೆಗೆ ಅಶೋಕ್ ನಗರ ಪೊಲೀಸರು ಬಾಂಬ್ ಸ್ಕ್ವಾಡ್ ನಿಂದ ಪರಿಶೀಲನೆ ನಡೆಸಲಾಗುತ್ತಿದೆ. ವಿಧಾನ ಪರಿಷತ್ ಸದಸ್ಯರಾದ ಬಿಜಿ ಪಾಟೀಲ್ ಒಡೆತನದ ಶಾಲೆ ಎಂದು ತಿಳಿದುಬಂದಿದೆ.
ಶಾಲೆಯಲ್ಲಿ ಬಾಂಬ್ ನಿಷ್ಕ್ರಿಯದಳ ಶ್ವಾನದಳ ಪರಿಶೀಲನೆ ನಡೆಸಿದೆ. ತಮಿಳುನಾಡಿನ ರಾಜಕೀಯದ ಬಗ್ಗೆ ಉಲ್ಲೇಖಿಸಲಾಗಿದೆ. ಮೆಲ್ ಸಂಬಂಧ ದೂರು ದಾಖಲಿಸಿಕೊಂಡು ತನಿಖೆ ಮಾಡುತ್ತೇವೆ. ತಮಿಳು ಮೇಲ್ ಐಡಿ ಇಂದ ಇಮೇಲ್ ಸಂದೇಶ ಬಂದಿದೆ. ಯಾರು ಭಯಪಡುವ ಅಗತ್ಯವಿಲ್ಲ ಎಂದು ಕಲ್ಬುರ್ಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಹೇಳಿಕೆ ನೀಡಿದರು.