ಕೊಪ್ಪಳ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವಂತ ಕುಂಭಮೇಳಕ್ಕೆ ತೆರಳಿ, ಪವಿತ್ರ ಸ್ನಾನ ಮಾಡಿದಂತ ಕೊಪ್ಪಳದ ಯುವಕನೊಬ್ಬ, ಅಲ್ಲಿಂದ ಅಯೋಧ್ಯೆಗೆ ರಾಮನ ದರ್ಶನ ಪಡೆಯಲು ತೆರಳುತ್ತಿದ್ದರು. ಈ ವೇಳೆಯಲ್ಲಿ ಗೋರಖ್ ಪುರದಲ್ಲಿ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಸಿದ್ಧಾಪುರ ನಿವಾಸಿ ಪ್ರವೀಣ್ ಹೊಸಮನಿ(27) ಎಂಬುವರು ಕುಂಭಮೇಳಕ್ಕೆ ತೆರಳಿದ್ದರು. ಅಲ್ಲಿ ಪವಿತ್ರ ಸ್ನಾನ ಮುಗಿಸಿ ಅಯೋದ್ಯೆಗೆ ಶ್ರೀರಾಮನ ದರ್ಶನಕ್ಕೆ ತೆರಳುತ್ತಿದ್ದರು. ಈ ವೇಳೆಯಲ್ಲಿ ಗೋರಖ್ ಪುರದ ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾನೆ.