Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತಾತ್ಕಾಲಿಕ ಕದನ ವಿರಾಮಕ್ಕೆ ಒಪ್ಪದ ಇರಾನ್: ಹಾರ್ಮುಜ್ ಜಲಸಂಧಿ ತೆರೆಯಲು ನಕಾರ!

06/04/2026 2:50 PM

ಸಾಮಾಜಿಕ ಜಾಲತಾಣದ ‘ಸ್ನೇಹ’ದ ಬಗ್ಗೆ ಇರಲಿ ಎಚ್ಚರ: ಬೆಳಗಾವಿಯ ಈ ಘಟನೆ ನಿಮಗೊಂದು ಪಾಠ!

06/04/2026 2:42 PM

ರಾಜ್ಯದ ರೈತರ ಗಮನಕ್ಕೆ: ಇನ್ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ‘FID ಸಂಖ್ಯೆ’ ಕಡ್ಡಾಯ

06/04/2026 2:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಂಗ್ರೆಸ್‌ ಸರ್ಕಾರದಿಂದಾಗಿ ಕರ್ನಾಟಕ ಸೂತಕದ ಮನೆಯಾಗಿದೆ: ಆರ್‌.ಅಶೋಕ್ ಕಿಡಿ
KARNATAKA

ಕಾಂಗ್ರೆಸ್‌ ಸರ್ಕಾರದಿಂದಾಗಿ ಕರ್ನಾಟಕ ಸೂತಕದ ಮನೆಯಾಗಿದೆ: ಆರ್‌.ಅಶೋಕ್ ಕಿಡಿ

By kannadanewsnow0904/02/2025 6:57 PM

ಹಾಸನ: ಕಾಂಗ್ರೆಸ್‌ ಸರ್ಕಾರದಿಂದಾಗಿ ಕರ್ನಾಟಕ ಸೂತಕದ ಮನೆಯಾಗಿದೆ. ಆರ್ಥಿಕ ವ್ಯವಸ್ಥೆ ಹದಗೆಟ್ಟಿರುವುದರಿಂದ ಜನರು ದಾರಿ ಕಾಣದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಕರ್ನಾಟಕ ಸೂತಕದ ಮನೆಯಾಗಿದೆ. ಮೈಕ್ರೋ ಫೈನಾನ್ಸ್‌ಗಳಿಂದ ಆತ್ಮಹತ್ಯೆ ನಡೆಯುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಸಾಯುತ್ತಿದ್ದಾರೆ. ಗುತ್ತಿಗೆದಾರರು ಹಣವಿಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಶೇ.60 ರ ಕಮಿಶನ್‌ ದಂಧೆಯಿಂದಾಗಿ ಅಧಿಕಾರಿಗಳು ಸಾಯುತ್ತಿದ್ದಾರೆ. ಇದರ ಜೊತೆಗೆ ಬಾಲಕಿಯರ ಮೇಲೆ ಅತ್ಯಾಚಾರ, ಕೊಲೆ, ಬ್ಯಾಂಕ್‌ ದರೋಡೆ ನಡೆಯುತ್ತಿದೆ ಎಂದು ದೂರಿದರು.

ರಾಜ್ಯದಲ್ಲಿ ಸುಮಾರು 24-25 ಜನರು ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೂ ಸರ್ಕಾರ ಸುಗ್ರೀವಾಜ್ಞೆ ಎನ್ನುತ್ತಿದೆಯೇ ಹೊರತು, ಒಂದೇ ಒಂದು ಮೈಕ್ರೋ ಫೈನಾನ್ಸ್‌ನ ವಿರುದ್ಧ ಕ್ರಮ ಕೈಗೊಂಡಿಲ್ಲ. ಸಿಎಂ ಸಿದ್ದರಾಮಯ್ಯ ಎಷ್ಟು ಗುಡುಗಿದರೂ ಮೈಕ್ರೋ ಫೈನಾನ್ಸ್‌ಗಳು ಕ್ಯಾರೇ ಎಂದಿಲ್ಲ. ಕುಂಭಮೇಳದಲ್ಲಿ ಜನರು ಸತ್ತಿದ್ದಕ್ಕೆ ಕಾಂಗ್ರೆಸ್‌ ನಾಯಕರು ಬಾಯಿ ಬಡಿದುಕೊಂಡರು. ಆದರೆ ಸಾಲ ವಸೂಲಿಗಾರರ ಕಿರುಕುಳದಿಂದ ಸತ್ತವರ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಮಾತನಾಡಿಲ್ಲ ಎಂದರು.

ನಿಗಮಗಳಿಗೆ ಹಣವಿಲ್ಲ

ಅಭಿವೃದ್ಧಿ ನಿಗಮಗಳಿಗೆ ಹೆಚ್ಚು ಅನುದಾನ ನೀಡಿ ಸಾಲ ಕೊಟ್ಟಿದ್ದರೆ, ಜನರು ಮೈಕ್ರೋ ಫೈನಾನ್ಸ್‌ ಮೊರೆ ಹೋಗುತ್ತಿರಲಿಲ್ಲ. ಡಾ.ಬಿ.ಆರ್.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಗೆ 2022-23 ರಲ್ಲಿ ಬಿಜೆಪಿ ಸರ್ಕಾರ 60 ಕೋಟಿ ರೂ. ಅನುದಾನ ನೀಡಿತ್ತು. 2024-25 ರಲ್ಲಿ ಕಾಂಗ್ರೆಸ್‌ 40 ಕೋಟಿ ರೂ. ನೀಡಿದೆ. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 45 ಕೋಟಿ ರೂ. ನೀಡಿದೆ. ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 50 ಕೋಟಿ ರೂ. ನೀಡಿದೆ. ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಗ್ಯಾರಂಟಿ ಬಗ್ಗೆ ಹೇಳಿದ್ದಕ್ಕೆ ಬಾಯಿ ಬಡಿದುಕೊಂಡಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ 1.5 ಲಕ್ಷ ಕೋಟಿ ರೂ. ಗೂ ಅಧಿಕ ಸಾಲವನ್ನು ಕಾಂಗ್ರೆಸ್‌ ಸರ್ಕಾರ ಮಾಡಲಿದೆ ಎಂದರು.

ತುರ್ತಾಗಿ ನಿಗಮಗಳಿಗೆ 5,000 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ, ಜನರಿಗೆ ಸಾಲ ಕೊಟ್ಟರೆ ಅನುಕೂಲವಾಗುತ್ತದೆ. ಜೊತೆಗೆ ಇರುವ ಕಾನೂನನ್ನೇ ಬಳಸಿ ಮೈಕ್ರೋ ಫೈನಾನ್ಸ್‌ಗಳಿಗೆ ಕಡಿವಾಣ ಹಾಕಬೇಕು. ಪ್ರಧಾನಿ ನರೇಂದ್ರ ಮೋದಿಯವರು ಕಿಸಾನ್‌ ಸಮ್ಮಾನ್‌ ಸೇರಿದಂತೆ ಅನೇಕ ಯೋಜನೆಗಳನ್ನು ನೀಡಿದ್ದಾರೆ. ಅದೇ ರೀತಿ ಅಭಿವೃದ್ಧಿ ಕಾರ್ಯಗಳಿಗೆ ಹಣ ಬಳಸಬೇಕು. ಅಭಿವೃದ್ಧಿ ಕಾರ್ಯಕ್ಕೆ 80,000 ಕೋಟಿ ರೂ. ಸಿಗುತ್ತದೆ. ಅದರಲ್ಲಿ 55,000 ಕೋಟಿ ರೂ. ಅನ್ನು ಗ್ಯಾರಂಟಿಗಳಿಗೆ ಬಳಸಿದ್ದಾರೆ. ಇನ್ನುಳಿದ ಹಣದಲ್ಲಿ ಅಭಿವೃದ್ಧಿ ಹೇಗಾಗುತ್ತದೆ? ಶಾಸಕ ಬಿ.ಆರ್‌.ಪಾಟೀಲ್‌ ಇದನ್ನೇ ಪ್ರಶ್ನೆ ಮಾಡಿ ರಾಜೀನಾಮೆ ನೀಡಿದ್ದಾರೆ ಎಂದರು.

BREAKING: ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿ ಅಯೋಧ್ಯೆಗೆ ತೆರಳುತ್ತಿದ್ದ ಕರ್ನಾಟಕದ ಯುವಕ ವಿದ್ಯುತ್ ಪ್ರವಹಿಸಿ ಸಾವು

BIG NEWS : ವಿವಾಹಿತ ಸಹೋದರಿಯ ಆಸ್ತಿಯಲ್ಲಿ ಸಹೋದರನಿಗೆ ಹಕ್ಕಿಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು | Supreme Court

ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

ಸಾಮಾಜಿಕ ಜಾಲತಾಣದ ‘ಸ್ನೇಹ’ದ ಬಗ್ಗೆ ಇರಲಿ ಎಚ್ಚರ: ಬೆಳಗಾವಿಯ ಈ ಘಟನೆ ನಿಮಗೊಂದು ಪಾಠ!

06/04/2026 2:42 PM2 Mins Read

ರಾಜ್ಯದ ರೈತರ ಗಮನಕ್ಕೆ: ಇನ್ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ‘FID ಸಂಖ್ಯೆ’ ಕಡ್ಡಾಯ

06/04/2026 2:32 PM1 Min Read

BIG NEWS: ಭ್ರಷ್ಟಾಚಾರಿಗೆ ಕೋರ್ಟ್ ಶಾಕ್: ಲಂಚ ಪಡೆದಿದ್ದ ಸರ್ಕಾರಿ ಅಧಿಕಾರಿಗೆ 2 ವರ್ಷ ಜೈಲು ಶಿಕ್ಷೆ, 40,000 ದಂಡ

06/04/2026 2:24 PM2 Mins Read
Recent News

ತಾತ್ಕಾಲಿಕ ಕದನ ವಿರಾಮಕ್ಕೆ ಒಪ್ಪದ ಇರಾನ್: ಹಾರ್ಮುಜ್ ಜಲಸಂಧಿ ತೆರೆಯಲು ನಕಾರ!

06/04/2026 2:50 PM

ಸಾಮಾಜಿಕ ಜಾಲತಾಣದ ‘ಸ್ನೇಹ’ದ ಬಗ್ಗೆ ಇರಲಿ ಎಚ್ಚರ: ಬೆಳಗಾವಿಯ ಈ ಘಟನೆ ನಿಮಗೊಂದು ಪಾಠ!

06/04/2026 2:42 PM

ರಾಜ್ಯದ ರೈತರ ಗಮನಕ್ಕೆ: ಇನ್ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ‘FID ಸಂಖ್ಯೆ’ ಕಡ್ಡಾಯ

06/04/2026 2:32 PM

BIG NEWS: ಭ್ರಷ್ಟಾಚಾರಿಗೆ ಕೋರ್ಟ್ ಶಾಕ್: ಲಂಚ ಪಡೆದಿದ್ದ ಸರ್ಕಾರಿ ಅಧಿಕಾರಿಗೆ 2 ವರ್ಷ ಜೈಲು ಶಿಕ್ಷೆ, 40,000 ದಂಡ

06/04/2026 2:24 PM
State News
KARNATAKA

ಸಾಮಾಜಿಕ ಜಾಲತಾಣದ ‘ಸ್ನೇಹ’ದ ಬಗ್ಗೆ ಇರಲಿ ಎಚ್ಚರ: ಬೆಳಗಾವಿಯ ಈ ಘಟನೆ ನಿಮಗೊಂದು ಪಾಠ!

By kannadanewsnow0906/04/2026 2:42 PM KARNATAKA 2 Mins Read

ಬೆಳಗಾವಿ: “ಪ್ರೀತಿ ಕುರುಡು” ಎನ್ನುವ ಮಾತಿದೆ. ಆದರೆ ಇಂದಿನ ಕಾಲದಲ್ಲಿ ಪ್ರೀತಿಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಗಳನ್ನು ನೋಡಿದರೆ, ಪ್ರೀತಿ ಮಾಡುವಾಗ…

ರಾಜ್ಯದ ರೈತರ ಗಮನಕ್ಕೆ: ಇನ್ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ‘FID ಸಂಖ್ಯೆ’ ಕಡ್ಡಾಯ

06/04/2026 2:32 PM

BIG NEWS: ಭ್ರಷ್ಟಾಚಾರಿಗೆ ಕೋರ್ಟ್ ಶಾಕ್: ಲಂಚ ಪಡೆದಿದ್ದ ಸರ್ಕಾರಿ ಅಧಿಕಾರಿಗೆ 2 ವರ್ಷ ಜೈಲು ಶಿಕ್ಷೆ, 40,000 ದಂಡ

06/04/2026 2:24 PM

PUC ಬಳಿಕ ಯಾವ ಕೋರ್ಸ್ ಆಯ್ಕೆ ಮಾಡಬೇಕು ಎನ್ನುವ ಗೊಂದಲದಲ್ಲಿದ್ದೀರಾ? : ಹಾಗಾದ್ರೆ ಇಲ್ಲಿದೆ ಉಪಯುಕ್ತ ಮಾಹಿತಿ!

06/04/2026 2:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.