ಬೆಂಗಳೂರು: ನಗರದಲ್ಲಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರ ಕಾರಿಗೆ ಹಿಂಬದಿಯಿಂದ ಗೂಡ್ಸ್ ಆಟೋವೊಂದು ಡಿಕ್ಕಿಯಾಗಿರುವಂತ ಘಟನೆ ನಡೆದಿದೆ.
ಬೆಂಗಳೂರಿನ ಕನ್ನಿಗ್ಯಾಂಮ್ ರಸ್ತೆಯಲ್ಲಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರ ಕಾರಿಗೆ ಹಿಂಬದಿಯಿಂದ ಗೂಡ್ಸ್ ಆಟೋವೊಂದು ಡಿಕ್ಕಿಯಾಗಿದೆ. ಈ ಘಟನೆಯಿಂದಾಗಿ ಕಾರಿನಿಂದ ಕೆಳಗಿಳಿದು ರಾಹುಲ್ ದ್ರಾವಿಡ್ ಪರಿಶೀಲಿಸಿದರು ಎನ್ನಲಾಗಿದೆ.
ಇದಷ್ಟೇ ಅಲ್ಲದೇ ಗೂಡ್ಸ್ ಆಟೋ ಚಾಲಕ ಹಾಗೂ ರಾಹುಲ್ ದ್ರಾವಿಡ್ ನಡುವೆ ಕೆಲ ಕಾಲ ವಾಗ್ವಾದ ಕೂಡ ನಡೆದಿದೆ. ಆ ಬಳಿಕ ಹೈಗ್ರೌಂಡ್ ಠಾಣೆಗೆ ತೆರಳಿ ಗೂಡ್ಸ್ ಆಟೋ ಚಾಲಕನ ನಂಬರ್ ಪಡೆದು ಅಲ್ಲಿಂದ ತೆರಳಿದ್ದಾರೆ. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.
ಹೂಡಿಕೆದಾರರ ಸಮಾವೇಶ: ರಾಜನಾಥ್ ಸಿಂಗ್, ಎಚ್ ಡಿಕೆ, ಜೋಶಿಗೆ ಖುದ್ದು ಆಹ್ವಾನ ನೀಡಿಡ ಸಚಿವ ಎಂ.ಬಿ.ಪಾಟೀಲ