ಉತ್ತರ ಪ್ರದೇಶ: ಮಹಾ ಕುಂಭಮೇಳದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿಯವರು ಉತ್ತರ ಪ್ರದೇಶದ ಪ್ರಯಾಗ್ ರಾಜ್ ಗೆ ಆಗಮಿಸಿದರು. ಅಲ್ಲಿಂದ ಅರೈಲ್ ಘಾಟ್ ಗೆ ತೆರಳಿದಂತ ಅವರು ಅಲ್ಲಿಂದ ದೋಣಿಯಲ್ಲಿ ಸಂಗಮ್ ಘಾಟ್ ಗೆ ತೆರಳಿ ಮಹಾ ಕುಂಭಮೇಳದ ಪ್ರಯುಕ್ತ ಪುಣ್ಯ ಸ್ನಾನ ಮಾಡಿದರು.
ಪ್ರಧಾನಿ ನರೇಂದ್ರ ಮೋದಿಯವರು ಮಹಾ ಕುಂಭಮೇಳದಲ್ಲಿ ಪಾಲ್ಗೊಂಡಿದ್ದಾರೆ. ಇಂದು ದೆಹಲಿಯಿಂದ ಪ್ರಯಾಗ್ ರಾಜ್ ಗೆ ಆಗಮಿಸಿದಂತ ಅವರು, ಅಲ್ಲಿಂದ ಅರೈಲ್ ಘಾಟ್ ಗೆ ತೆರಳಿದರು. ಅವರಿಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸಾಥ್ ನೀಡಿದರು.
ಅರೈಲ್ ಘಾಟ್ ನಿಂದ ಮಹಾ ಕುಂಭಮೇಳದ ಪ್ರಯುಕ್ತ ಪುಣ್ಯ ಸ್ನಾನ ಮಾಡಲು ಪ್ರಧಾನಿ ಮೋದಿ ಅವರು ದೋಣಿಯಲ್ಲಿ ಸಂಗಮ್ ಘಾಟ್ ಗೆ ತೆರಳಿದರು. ಸಂಗಮ್ ಘಾಟ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕುಂಭಮೇಳದ ಪ್ರಯುಕ್ತ ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡಿದರು.