ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಗಾಗಿ ಇಂದು ಮತದಾನ ನಡೆಯುತ್ತಿದೆ. ಇದೀಗ ತಿಳಿದು ಬಂದಿರುವ ಮಾಹಿತಿಯಂತೆ ಇಂದು ಬೆಳಿಗ್ಗೆ 11 ಗಂಟೆಯವರೆಗೆ ಶೇ.19.95ರಷ್ಟು ಮತದಾನ ಆಗಿರುವುದಾಗಿ ಹೇಳಲಾಗುತ್ತಿದೆ.
ಕೇಂದ್ರ ಚುನಾವಣಾ ಆಯೋಗದ ಮಾಹಿತಿಯಂತೆ ದೆಹಲಿ ವಿಧಾನಸಭಾ ಚುನಾವಣೆಗೆ ನಡೆಯುತ್ತಿರುವಂತ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ. ಇಂದು ಬೆಳಗ್ಗೆ 11ರವರೆಗೆ ಶೇ.19.95ರಷ್ಟು ಆಗಿರುವುದಾಗಿ ಮಾಹಿತಿ ನೀಡಿದೆ.
ಇಂದು ತಮ್ಮ ಮತ ಚಲಾಯಿಸಿ ಮಾತನಾಡಿದಂತ ಕೇಜ್ರಿವಾಲ್ ಪತ್ನಿ ಸುನೀತಾ ಕೇಜ್ರಿವಾಲ್, ದೆಹಲಿಯ ಜನರು ತುಂಬಾ ಬುದ್ಧಿವಂತರಾಗಿದ್ದಾರೆ. ನಾವು ಅವರನ್ನು ನಂಬುತ್ತೇವೆ. ಗೂಂಡಾಗಿರಿಯನ್ನು ಅವರು ಸಹಿಸೋದಿಲ್. ದೆಹಲಿಯ ಜನರು ಸರಿಯಾದ ಆಯ್ಕೆ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.