ಯಾದಗಿರಿ : ರಾಜ್ಯದಲ್ಲಿ ಮತ್ತೊಂದು ಭೀಕರವಾದಂತಹ ಅಪಘಾತ ಸಂಭವಿಸಿದ್ದು ಬೈಕ್ಗೆ ವೇಗವಾಗಿ ಬಂದು ಸಾರಿಗೆ ಬಸ್ ಗುದ್ದಿದ ಪರಿಣಾಮ ಬೈಕ್ ನಲ್ಲಿ ಚಲಿಸುತ್ತಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ ನಡೆದಿದೆ.
ಹೌದು ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ಯಾದಗಿರಿಯ ಸುರಪುರ ತಾಲೂಕಿನ ತಿಂಥಣಿ ಬಳಿ ಈ ಒಂದು ಭೀಕರ ಅಪಘಾತ ನಡೆದಿದೆ. ತಿಂಥಣಿ ಕಡೆಗೆ ಹೊರಟಿದ್ದ ಬೈಕಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.