ಹಾಸನ : ಕಾರಿನ ಟೈರ್ ಪಂಚರ್ ಆಗಿ ನಿಯಂತ್ರಣ ಕಳೆದ ಕೊಂಡು ರಸ್ತೆ ಬದಿಯಲ್ಲಿದ್ದಂತಹ ಕೆರೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಐವರು ವೈದ್ಯಕೀಯ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಮುದ್ದೆನಹಳ್ಳಿ ಗೇಟ್ ಬಳಿ ನಡೆದಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಐವರಿಗೆ ಗಂಭೀರವಾಗಿ ಗಾಯಗಳಿವೆ. ತಕ್ಷಣ ಸ್ಥಳೀಯರು ಚನ್ನರಾಯಪಟ್ಟಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರಿನಲ್ಲಿದ್ದವರು ಚೆನ್ನೈ ಮೂಲದ ವೈದ್ಯಕೀಯ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಕಾರಿನಲ್ಲಿ ಸಿಲುಕಿದವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಎಲ್ಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.