ಬೆಂಗಳೂರು : ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಪಟ್ಟಂತೆ SIT ಅಧಿಕಾರಿಗಳು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಪಾಡ್ ಗೆ ಎರಡನೇ ಬಾರಿ ನೋಟಿಸ್ ನೀಡಿದ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಇದು ತನಿಖೆಯ ಒಂದು ಭಾಗ ಅಷ್ಟೇ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ತನಿಖೆಯ ಒಂದು ಭಾಗ ಅಷ್ಟೇ. ಯಾರನ್ನು ಕರೆದು ಹೇಳಿಕೆ ದಾಖಲು ಮಾಡಿಕೊಳ್ಳಬೇಕು ಆ ಪ್ರಕ್ರಿಯೆ ಮಾಡುತ್ತಿದ್ದಾರೆ. ಅದರಲ್ಲಿ ಮೊಹಮ್ಮದ್ ನಲಪಾಡ್ ಒಬ್ಬರು ಎಂದು ಸಚಿವ ಜಿ.ಪರಮೇಶ್ವರ್ ಅವರು ತಿಳಿಸಿದರು.
ಈ ಒಂದು ಪ್ರಕರಣದಲ್ಲಿ ಯಾವ ರೀತಿ ವ್ಯವಹಾರ ಇದೆ ಎಂದು ಅಧಿಕಾರಿಗಳು ಪತ್ತೆ ಮಾಡುತ್ತಿದ್ದಾರೆ. ಹಣಕಾಸಿನ ವ್ಯವಹಾರ ಇದೆಯಾ ಅಥವಾ ಇಲ್ವಾ ಅಂತ ತನಿಖೆ ನಡೆಸುತ್ತಾರೆ ಎಂದು ಬೆಂಗಳೂರಿನಲ್ಲಿ ಗ್ರಹ ಇಲಾಖೆಯ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.SIT ಅಧಿಕಾರಿಗಳು ನೋಟಿಸ್ ನೀಡಿದ್ದರ ಹಿನ್ನೆಲೆಯಲ್ಲಿ ಮೊಹಮ್ಮದ್ ನಲಪಾಡ್ ಗೆ ಬಂಧನದ ಭೀತಿ ಕೂಡ ಎದುರಾಗಿದೆ.