ಬೆಂಗಳೂರು : ಸರ್ಕಾರಿ ನೌಕರರ ನಕಲಿ ದಾಖಲೆ ಸೃಷ್ಟಿಸಿ ಸುಮಾರು 7 ಕೋಟಿಗೂ ಅಧಿಕ ಹಣ ಪಡೆದು ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಯನ್ನು ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಈ ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರು, ಬ್ಯಾಂಕ್ ವಂಚನೆ ಕೇಸ್ ನಲ್ಲಿ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ಆದೇಶ ಹೊರಡಿಸಿದರು. ಸಿಬಿಐ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣ ಶೆಟ್ಟಿ ದೋಷಿ ಎಂದು ಇದೀಗ ಕೋರ್ಟ್ ಆದೇಶ ಹೊರಡಿಸಿದೆ. 2008ರಲ್ಲಿ ಎಸ್‌ಬಿಎಂ ಬ್ಯಾಂಕ್ ದಾಖಲಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ವಂಚನೆ, ಫೋರ್ಜರಿ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ಆದೇಶ ನೀಡಿದೆ.
7.17 ಕೋಟಿ ಸಾಲ ಪಡೆಯಲು ನಕಲಿ ದಾಖಲೆ ಸೃಷ್ಟಿಸಲಾಗಿತ್ತು. ಸರ್ಕಾರಿ ನೌಕರರ ನಕಲಿ ದಾಖಲೆ ಸೃಷ್ಟಿ ಮಾಡಿ ಸಾಲ ಪಡೆದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಕೃಷ್ಣಶೆಟ್ಟಿ ದೋಷ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.ಹಾಗಾಗಿ ಪ್ರಕರಣದಲ್ಲಿ 3 ವರ್ಷಕ್ಕಿಂತ ಹೆಚ್ಚು ಶಿಕ್ಷೆ ಆದರೆ ಜೈಲಿಗೆ ಕಳುಹಿಸಲಾಗುತ್ತದೆ ಇಲ್ಲವಾದರೆ ಅಪರಾಧಿಗಳಿಗೆ ಜಾಮೀನು ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.