ಉತ್ತರಕನ್ನಡ : ಉತ್ತರಕನ್ನಡದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿ ಟೆಂಪೋ ಡಿಕ್ಕಿಯಾಗಿ ನೌಕಾ ನೆಲೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸಾವನ್ನಪ್ಪಿದ್ದಾನೆ. ಪಶ್ಚಿಮ ಬಂಗಾಳ ಮೂಲದ ಕಟ್ಟಡ ಕಾರ್ಮಿಕ ಜಸ್ತಿ ಮಂದಾಲ್ (50) ಸಾವನ್ನಪ್ಪಿರುವ ಕಾರ್ಮಿಕ ಎಂದು ತಿಳಿದುಬಂದಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರದ ನೌಕಾ ನೆಲೆಯಲ್ಲಿ ನಿನ್ನೆ ರಾತ್ರಿ ಒಂದು ಘಟನೆ ಸಂಭವಿಸಿದೆ. ಎಲ್ ಎನ್ ಟಿ ಕಂಪನಿಯ ಗುತ್ತಿಗೆ ಆಧಾರದಲ್ಲಿ ಮಂಡಾಲ್ ಕೆಲಸ ಮಾಡುತ್ತಿದ್ದ. ಕೆಲಸ ಮುಗಿದ ಬಳಿಕ ಕಾರ್ಮಿಕರನ್ನು ಕರೆದೊಯ್ಯಲು ಟೆಂಪೋ ಬಂದಿತ್ತು. ಈ ವೇಳೆ ನಿಯಂತ್ರಣ ತಪ್ಪಿ ಕಾರ್ಮಿಕ ಮಂಡಾಲ್ ಗೆ ಟೆಂಪೋ ಡಿಕ್ಕಿ ಹೊಡೆದಿದೆ. ಈ ವೇಳೆ ಗಂಭೀರವಾಗಿ ಕಾಯ್ಕೊಂಡಿದ್ದ ಮಂಡಾಲ್ ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿ ಆಗದೆ ಜಸ್ತಿ ಮಂಡಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಸದ್ಯ ಕಾರವಾರ ಪೊಲೀಸರು ಟೆಂಪೋ ಚಾಲಕರ ಅಜಯ್ ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾರ್ಮಿಕರು ಮತ್ತು ಕುಟುಂಬಸ್ಥರು ಪರಿಹಾರ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಮೃತ ಜಸ್ತಿ ಮಂಡಾಲ್ ಕುಟುಂಬಕ್ಕೆ 20 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಒತ್ತಾಯ ಮಾಡಿದ್ದು, ಕಾರವಾರ ಗ್ರಾಮೀಣ ಠಾಣೆ ಪೋಲಿಸರು ಭೇಟಿ ನೀಡಿದ್ದಾರೆ.