ಬೆಂಗಳೂರು : ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಭವಿಷ್ಯವಾಣಿಗೆ ಯಾವುದೇ ಬೆಲೆ ಇಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿಂದು ಕಾವೇರಿ ಆಸ್ಪತ್ರೆ ಕೊಡುಗೆಯಾಗಿ ನೀಡಿದ ಆಂಬ್ಯುಲೆನ್ಸ್ ಸ್ವೀಕರಿಸಿ ಮಾತನಾಡಿದ ಅವರು, ಬಿಜೆಪಿಯ ಆಂತರಿಕ ಜಗಳ ಹಾದಿ, ಬೀದಿಗೆ ಬಂದಿದ್ದು, ಅವಾಚ್ಯ ಶಬ್ದಗಳಲ್ಲಿ ಬೈದಾಡಿಕೊಳ್ಳುತ್ತಿದ್ದಾರೆ. ಅವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದರು.
ಮತಗಟ್ಟೆ ಸಮೀಕ್ಷೆ ಸುಳ್ಳಾಗಿದೆ
ದೆಹಲಿ ಚುನಾವಣೆ ಕುರಿತಂತೆ ಮತಗಟ್ಟೆ ಸಮೀಕ್ಷೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆಯೂ ಮತಗಟ್ಟೆ ಸಮೀಕ್ಷೆಗಳು ಸುಳ್ಳಾಗಿವೆ. ಕಾಂಗ್ರೆಸ್ ಅಧಿಕಾರಕ್ಕಾಗಿ ರಚನೆಯಾದ ಪಕ್ಷವಲ್ಲ. ಅದು ಜನಸೇವೆಗಾಗಿ, ಸ್ವಾತಂತ್ರ್ಯಕ್ಕಾಗಿ ರೂಪುಗೊಂಡ ಆಂದೋಲನ. ನಾನು ಅಧಿಕಾರದಲ್ಲಿದ್ದರೂ ಜನ ಸೇವೆ ಮಾಡುತ್ತೇವೆ. ಪ್ರತಿಪಕ್ಷದಲ್ಲಿದ್ದರೂ ಜನರಿಗಾಗಿ ಹೋರಾಟ ಮಾಡುತ್ತೇವೆ ಎಂದರು.