ಬೆಂಗಳೂರು : ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದ್ದ ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಹಗರಣದ ಕಿಂಗ್ ಪಿನ್ ಶ್ರೀಕಿಯನ್ನು ಬಂಧಿಸಲಾಗಿದ್ದು, ಇದೀಗ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರು ಇದೀಗ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಸಿಐಡಿ ಕಚೇರಿಯ ಎಸ್ ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ಬಿಟ್ ಕಾಯಿನ್ ಹಗರಣದ ಪ್ರಮುಖ ರೂವಾರಿ ಎನ್ನಲಾದ ಅಂತಾರಾಷ್ಟ್ರೀಯ ಮಟ್ಟದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜತೆ ನಲಪಾಡ್ ವ್ಯಾವಹಾರಿಕ ನಂಟು ಹೊಂದಿ ದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಆರೋಪ ಹಿನ್ನೆಲೆಯಲ್ಲಿ ನಲಪಾಡ್ ಅವರಿಗೆ ವಿಚಾರಣೆಗೆ ಬರುವಂತೆ ಸೆಕ್ಷನ್ 41ರಡಿ SIT ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿ ಡಿವೈಎಸ್ ಪಿ ಬಾಲರಾಜ್ ಮುಂದೆ ನಲಪಾಡ್ ವಿಚಾರಣೆಗೆ ಹಾರಜಾಗಿದ್ದಾರೆ.
ಸಾಮಾನ್ಯವಾಗಿ ಆರೋಪಿ ತರಿಗೆ ಈ ಸೆಕ್ಷನ್ ಅಡಿ ತನಿಖಾ ಧಿಕಾರಿ ನೋಟಿಸ್ ನೀಡು ತ್ತಾರೆ. ಹೀಗಾಗಿ ಅದೇ ಸೆಕ್ಷನ್ ಅಡಿ ನಲಪಾಡ್ ಅವರಿಗೆ 2ನೇ ಬಾರಿಗೆ ಎಸ್‌ಐಟಿ ವಿಚಾರಣೆಗೆ ಕರೆದಿರುವುದು ಬಂಧನ ಭೀತಿಗೆ ಕಾರಣವಾಗಿದೆ.ಕೆಲ ತಿಂಗಳ ಹಿಂದೆ ಕೂಡ ನಲಪಾಡ್ ಅವರನ್ನು ಎಸ್‌ಐಟಿ ವಿಚಾರಣೆ ನಡೆಸಿ ಹೇಳಿಕೆ ಪಡೆದಿತ್ತು. ಹ್ಯಾಕರ್‌ಶ್ರೀಕಿಯಿಂದ ಕೋಟ್ಯಂತರ ರುಪಾಯಿ ನಲಪಾಡ್ ಪಡೆ ದಿದ್ದಾರೆ ಎಂಬ ಆಪಾದನೆ ಸಹ ಇದೆ.