ಮಂಡ್ಯ : ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಿಹಳ್ಳಿ ಅರಣ್ಯದಲ್ಲಿ ಕಾಡ್ಗಿಚ್ಚಿನಿಂದ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.
ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಿಹಳ್ಳಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಗಳೂರು-ಮೈಸೂರು ಹೆದ್ದಾರಿವರೆಗೂ ದಟ್ಟ ಹೊಗೆ ಹಬ್ಬಿದೆ. ದಟ್ಟ ಹೊಗೆಯಿಂದ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಕಾಡ್ಗಿಚ್ಚಿನಿಂದ ಸುಮಾರು 10 ಹೆಕ್ಟರ್ ಅರಣ್ಯ ನಾಶವಾಗಿದೆ. ಅಗ್ನಿ ಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.