ಬೆಂಗಳೂರು : ತಿರುಪತಿ ದೇವಾಲಯದ ರೀತಿಯಲ್ಲಿ ಯಲ್ಲಮ್ಮನ ಗುಡ್ಡ ಅಭಿವೃದ್ಧಿ ಮಾಡಲಾಗುವುದು ಎಂದು ಪ್ರವಾಸೋದ್ಯಮ ಸಚಿವರಾದ ಎಚ್. ಕೆ. ಪಾಟೀಲ್ ಅವರು ತಿಳಿಸಿದ್ದಾರೆ.
ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ಪವಿತ್ರಗುಡ್ಡದ ಅಭಿವೃದ್ಧಿಗೆ ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ) ಅಭಿವೃದ್ಧಿಯನ್ನು ಮಾದರಿಯಾಗಿ ಇಟ್ಟುಕೊಂಡು ಯೋಜನೆ ರೂಪಿಸಲಾಗುವುದು. ಈ ಬಾರಿ ಭಾರತ ಹುಣ್ಣಿಮೆ ವೇಳೆ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಜಿಲ್ಲಾಡಳಿತ ವತಿಯಿಂದ ಜನಸಂದಣಿ ನಿರ್ವಹಣೆ, ಪಾರ್ಕಿಂಗ್, ಶೌಚಾಲಯ, ಎಲ್‌ಇಡಿ ಸ್ರ್ಕೀನ್ ಅಳವಡಿಕೆ ಸೇರಿ ಕಾಮಗಾರಿ ಆರಂಭಿಸಲಾಗಿದೆ. ದಾಸೋಹ ಭವನ ಮತ್ತು ಮೇವು ದಾಸೋಹ ಭವನ ನಿರ್ಮಾಣಕ್ಕೆ ಒಂದು ತಿಂಗಳಿನಲ್ಲಿ ಶಂಕು ಸ್ಥಾಪನೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದ್ದಾರೆ.