ಜೈಪುರ: ಜೈಪುರದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಹಾಕುಂಭಮೇಳಕ್ಕೆ ತೆರಳುತ್ತಿದ್ದ 8 ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜೈಪುರದ ಮೊಖಂಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವೇಳೆ ಕಾರಿನ ಟೈರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಬಸ್ ಗೆ ಡಿಕ್ಕಿಯಾಗಿ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಮೃತಪಟ್ಟವರ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.