ಕಲಬುರ್ಗಿ : ಕಲಬುರ್ಗಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕಬ್ಬು ತುಂಬಿದ ಟ್ರಾಕ್ಟರ್ ಗೆ ಕಾರು ಢಿಕ್ಕಿಯಾಗಿ ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದು, ಕಾರು ಮೂವರು ಗಾಯಗೊಂಡಿರುವ ಘಟನೆ ಅಫಜಲಪುರ ತಾಲ್ಲೂಕಿನ ಚೌಡಾಪುರ ತಾಂಡ ಬಳಿ ನಡೆದಿದೆ.
ಕಲಬುರಗಿ ನಗರ ಪ್ರಶಾಂತ ನಗರ ನಿವಾಸಿ ವಿದ್ಯಾ (40) ಸ್ಥಳದಲ್ಲೇ ಮೃತಪಟ್ಟ ದುರ್ದೈವಿ, ನಿತಿನ್ ಕುಮಾರ್ (42) ಮಕ್ಕಲಾದ್ ವೈಷ್ಣವಿ (15) ಗಂಭೀರ ಗಾಯಗೊಂಡಿದ್ದು, ವೇದಾಂತ (10) ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಗಾಯಗೊಂಡವರಿಗೆ ಕಲಬುರ್ಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಚೌಡಾಪುರ ತಾಂಡಾ ಬಳಿ ಕಬ್ಬು ತುಂಬಿಕೊಂಡು ಹೊರಟಿದ್ದ ಟ್ರಾಕ್ಟರ್ ಗೆ ಕಲಬುರ್ಗಿ ಕಡೆಯಿಂದ ವೇಗವಾಗಿ ಬಂದಂತಹ ಕಾರು ಡಿಕ್ಕಿ ಹೊಡೆದಿದೆ. ಹಾಗಾಗಿ ಈ ಒಂದು ದುರಂತ ಸಂಭವಿಸಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶೀಲಿಸಿದರು. ಅಪಘಾತದ ಕುರಿತು ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.