ಬೆಂಗಳೂರು : ಇಡೀ ದೇಶದಲ್ಲೇ ಭಾರಿ ಚರ್ಚೆಗೆ ಗ್ರಾಸವಾಗಿದ್ದ PSI ನೇಮಕಾತಿ ಹಗರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ನಾಯಕರ ವಿರುದ್ಧ ಯಾವುದೇ ಸಾಕ್ಷಿ ಸಿಗದ ಹಿನ್ನೆಲೆಯಲ್ಲಿ ಈ ಒಂದು ಪ್ರಕರಣ ತಾರ್ಕಿಕ ಅಂತ್ಯಕ್ಕೆ ಬಂದಿದ್ದು, ಬಿಜೆಪಿ ನಾಯಕರಿಗೆ ಕ್ಲೀನ್ ಚಿಟ್ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಹೌದು ಈ ಸಂಬಂಧ ಶೀಘ್ರ, ಸರ್ಕಾರಕ್ಕೆ ತನ್ನ ಅಂತಿಮ ವಿಚಾರಣಾ ವರದಿಯನ್ನು ಎಸ್‌ಐಟಿ ಸಲ್ಲಿಸಲಿದ್ದು, ಎಫ್ ಎಸ್‌ಎಲ್ ವರದಿಗೆ ಎಸ್‌ಐಟಿ ಕಾಯುತ್ತಿದೆ ಎಂದು ತಿಳಿದುಬಂದಿದೆ.ಆರೋಪಕ್ಕೆ ತುತ್ತಾಗಿದ್ದ ಬಿ.ವೈ.ವಿಜಯೇಂದ್ರ, ಬಸವರಾಜ್ ಬೊಮ್ಮಾಯಿ, ಅಶ್ವತ್ ನಾರಾಯಣ್, ಆರಗ ಜ್ಞಾನೇಂದ್ರ ಮತ್ತಿತರ ನಾಯಕರು ಕಳಂಕ ಮುಕ್ತರಾಗುವ ಸಾಧ್ಯತೆಗಳಿವೆ. ಇವರ ಕುರಿತ ಆರೋಪ ಗಳಿಗೆ ಯಾರೊ ಬ್ಬರೂ ಪುರಾವೆ ಒದಗಿಸಿಲ್ಲ ಎಂದು ತಿಳಿದುಬಂದಿದೆ.
ಪ್ರಕರಣ ಹಿನ್ನೆಲೆ?
545 ಪಿಎಸ್‌ಐ ಹುದ್ದೆಗಳ ಭರ್ತಿಗಾಗಿ 2021 ಅಕ್ಟೋಬರ್ 3 ರಂದು ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿನ 93 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಹುದ್ದೆಗಳನ್ನು ಅಕ್ರಮವಾಗಿ ಗಿಟ್ಟಿಸಿಕೊಳ್ಳಲು ಹಣ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣದ ಗಂಭೀರತೆಯನ್ನು ಅರಿತ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತ್ತು.
ಪ್ರಕರಣದ ಗಂಭೀರತೆಯನ್ನು ಅರಿತ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತ್ತು. 545 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಹಿನ್ನೆಲೆ ಪಿಎಸ್‌ಐ ನೇಮಕಾತಿ ವಿಭಾಗದಲ್ಲಿ ಅಧಿಕಾರಿಗಳಿಗಿಂತ ಬ್ರೋಕರ್ಗಳಿಗೂ ಹಣದ ಹೊಳೆ ಹರಿದಿತ್ತು. ಬ್ರೋಕರ್ಗಳ ಹಂತದಲ್ಲಿಯೂ ಕನಿಷ್ಠ 10 ಲಕ್ಷ, ನೇಮಕಾತಿ ವಿಭಾಗದ ಅಧಿಕಾರಿಗೆ 30-35 ಲಕ್ಷ ತಲುಪುತ್ತಿತ್ತು ಎಂಬ ಅಂಶ ತಿಳಿದುಬಂದಿತ್ತು.
ಹಗರಣಕ್ಕೆ ಸಂಬಂಧಿಸಿದಂತೆ 110 ಜನರನ್ನು ಬಂಧಿಸಲಾಗಿತ್ತು. ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಎಡಿಜಿಪಿ ಶ್ರೇಣಿಯ ಐಪಿಎಸ್ ಅಮೃತ್ ಪಾಲ್ರನ್ನು ಬಂಧಿಸಲಾಗಿತ್ತು. ಮರು ಪರೀಕ್ಷೆಗೆ 2022 ಏಪ್ರಿಲ್ನಲ್ಲಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಆದೇಶ ಪ್ರಶ್ನಿಸಿ ಅಭ್ಯರ್ಥಿಗಳು ಹೈಕೋರ್ಟ್ ಮೊರೆಹೋಗಿದ್ದರು. ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್ ಮರು ಪರೀಕ್ಷೆಗೆ ಸೂಚಿಸಿತ್ತು. ಬಳಿಕ 117 ಕೇಂದ್ರದಲ್ಲಿ 54 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು