ಹಾವೇರಿ : ಹಾವೇರಿ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ದೇಗುಲದ ಕಳಸಾರೋಹಣದ ವೇಳೆ ಕ್ರೇನ್ ಕಟ್ ಆಗಿ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾನಗಲ್ ತಾಲೂಕಿನ ಶೇಷಗಿರಿ ಗ್ರಾಮದಲ್ಲಿ ಕಳಸರೋಹಣದ ವೇಳೆ ಕ್ರೇನ್ ಕಟ್ ಆಗಿ ಕೆಳಗೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಮಂಜುನಾಥ್ ಪಾಟೀಳ್ (42) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಂಜುನಾಥ್ ಬಡಿಗೇರ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ.