ದಾವಣಗೆರೆ : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಎ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ ಕಲ್ಯಾಣ ಕರ್ನಾಟಕದ 6,000 ಸೇರಿದಂತೆ 16,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದ್ದೇವೆ. ಶೀಘ್ರವಾಗಿ ಕಲ್ಯಾಣ ಕರ್ನಾಟಕದ 6 ಸಾವಿರ ಸೇರಿದಂತೆ ರಾಜ್ಯದಲ್ಲಿ 16 ಸಾವಿರ ಶಿಕ್ಷಕರ ನೇಮಕಾತಿಯನ್ನು ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ನಮ್ಮ ಶಾಲೆ ನಮ್ಮ ಜವಬ್ಧಾರಿ ಯೋಜನೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದಕ್ಕಾಗಿ 39 ಸಾವಿರ ವಾಟ್ಸಪ್ ಗ್ರೂಪ್ ಗಳನ್ನು ಮಾಡಿದ್ದೇವೆ. 5 ಸಾವಿರ ರೂ.ನಿಂದ 5 ಕೋಟಿಯವರಗೂ ಅನುದಾನ ಬಂದಿದೆ. ಏಷ್ಯನ್ ಡೆವಲಪಪ್‌ಮೆಂಟ್ ಬ್ಯಾಂಕ್ (ಎಡಿಬಿ ಬ್ಯಾಂಕ್) ಇತರ ಮೂಲಗಳಿಂದ ಅನುದಾನ ಬರುತ್ತಿದೆ ಎಂದು ಹೇಳಿದ್ದಾರೆ.