ತೆಲಂಗಾಣ : ದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ತೆಲಂಗಾಣದಲ್ಲಿ ಬಾಲಕಿಯ ಮೇಲೆ ಐವರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
ತೆಲಂಗಾನದ ರಂಗಾರೆಡ್ಡಿ ಜಿಲ್ಲೆಯ ನರಸಿಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಹೈದರ್ಶಾ ಕೋಟ್ಲಾದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿದೆ. ಐವರು ಯುವಕರು ಒಬ್ಬ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನಂತರ ಅವರು ಅಲ್ಲಿಂದ ಪರಾರಿಯಾಗಿದ್ದಾರೆ. ಸಂತ್ರಸ್ತ ಬಾಲಕಿ ತನ್ನ ಪೋಷಕರೊಂದಿಗೆ ಪೊಲೀಸರನ್ನು ಸಂಪರ್ಕಿಸಿದಳು. ಘಟನೆಗೆ ಪ್ರತಿಕ್ರಿಯಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಾಲಕಿಯನ್ನು ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಕೃತ್ಯವೆಸಗಿದ ಐವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ, ರಿಮಾಂಡ್‌ಗೆ ಕಳುಹಿಸಲಾಗಿದೆ.