ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಕಂಪ್ಯೂಟರ್ ಸಾಕ್ಷಾರತಾ ಪರೀಕ್ಷೆಗೆ ಸಂಬಂಧಿಸಿದಂತೆ ತಿದ್ದುಪಡಿ ವಿಧೇಯಕದ ಕುರಿತು ರಾಜ್ಯ ಸರ್ಕಾರವು ರಾಜ್ಯಪತ್ರವನ್ನು ಪ್ರಕಟಿಸಿದೆ.
ಅಧಿಸೂಚನೆ
ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು, 2012, ಇದನ್ನು ಮತ್ತಷ್ಟು ತಿದ್ದುಪಡಿ ಮಾಡುವುದಕ್ಕೆ ದಿನಾಂಕ: 18.01.2025ರ ಅಧಿಸೂಚನೆ ಸಂಖ್ಯೆ: ಸಿಆಸುಇ 103 ಸೇವನೆ 2024 ರಲ್ಲಿ ಪ್ರಕಟಿಸಿರುವ ಈ ಮುಂದಿನ ನಿಯಮಗಳ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಅದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆಗಳನ್ನು ಮತ್ತು ಸಲಹೆಗಳನ್ನು ಆಹ್ವಾನಿಸಿ ದಿನಾಂಕ: 18.01.2025ರ ಕರ್ನಾಟಕ ರಾಜ್ಯಪತ್ರದ ಭಾಗ IV-ಎ ರಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ 14)ರ 3ನೇ ಪ್ರಕರಣದ (2)ನೇ ಉಪ ಪ್ರಕರಣದ (ಎ) ಖಂಡವನ್ನು ಪ್ರಕರಣ 8 ರೊಂದಿಗೆ ಓದಿಕೊಂಡು ಅಗತ್ಯಪಡಿಸಲಾದಂತೆ ಪ್ರಕಟಿಸಲಾಗಿರುವುದರಿಂದ;
ಸದರಿ ರಾಜ್ಯಪತ್ರವನ್ನು ದಿನಾಂಕ: 18.01.2025ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಿರುವುದರಿಂದ;
ಮತ್ತು, ಸದರಿ ಕರಡು ನಿಯಮಗಳ ಬಗ್ಗೆ ಸ್ವೀಕೃತವಾಗಿರುವ ಆಕ್ಷೇಪಣೆ ಮತ್ತು ಸಲಹೆಗಳನ್ನು ರಾಜ್ಯ ಸರ್ಕಾರವು ಪರಿಶೀಲಿಸಿರುವುದರಿಂದ;
ಈಗ, ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ 14) ರ 3ನೇ ಪ್ರಕರಣದ (1) ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಂದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ನಿಯಮಗಳನ್ನು ರಚಿಸುತ್ತದೆ, ಎಂದರೆ:-
ನಿಯಮಗಳು
1. ಶೀರ್ಷಿಕೆ ಮತ್ತು ಪ್ರಾರಂಭ:- (1) ಈ ನಿಯಮಗಳನ್ನು ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) (ತಿದ್ದುಪಡಿ) ನಿಯಮಗಳು, 2025 ಎಂದು ಕರೆಯತಕ್ಕದ್ದು.
(2) ಈ ನಿಯಮಗಳು ಅಧಿಕೃತ ರಾಜ್ಯ ಪತ್ರದಲ್ಲಿ ಅಂತಿಮವಾಗಿ ಪ್ರಕಟಗೊಂಡ ದಿನಾಂಕದಿಂದ ಜಾರಿಗೆ ಬರತಕ್ಕದ್ದು.
2. ನಿಯಮ 2ಕ್ಕೆ ತಿದ್ದುಪಡಿ:-ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ರ (ಇದರಲ್ಲಿ ಇನ್ನು ಮುಂದ ಸದರಿ ನಿಯಮಗಳೆಂದು ಉಲ್ಲೇಖಿಸಲಾಗಿದೆ) ನಿಯಮ 2ರಲ್ಲಿ “ದಿನಾಂಕ: 31.12.2024 ರೊಳಗೆ” ఎంబ ಪದ ಮತ್ತು ಅಂಕಿಗಳ ಬದಲಿಗೆ “ದಿನಾಂಕ: 31.12.2025 ರೊಳಗೆ” ಎಂಬ ಪದ ಮತ್ತು ಅಂಕಿಗಳನ್ನು ໖: 01.01.2025 ರಿಂದ ಜಾರಿಗೆ ಭಾವಿಸಿ ಪ್ರತಿಷ್ಠಾಪಿಸತಕ್ಕದ್ದು. ಬಂದಿವೆ ಎಂದು
3. ನಿಯಮ 3ಕ್ಕೆ ತಿದ್ದುಪಡಿ :- ಸದರಿ ನಿಯಮಗಳ ನಿಯಮ 3ರಲ್ಲಿ,
(ಎ) ಉಪ ನಿಯಮ (1)ರಲ್ಲಿ “ದಿನಾಂಕ: 31.12.2024 ರೊಳಗೆ”, ಎಂಬ ಪದ ಮತ್ತು ಅಂಕಿಗಳ ಬದಲಿಗೆ “ದಿನಾಂಕ: 31.12.2025 ರೊಳಗೆ”, ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ: 01.01.2025 ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು ಮತ್ತು
(ಬಿ) ಉಪ ನಿಯಮ (2)ರಲ್ಲಿ “ದಿನಾಂಕ: 31.12.2024 ರೊಳಗೆ”, ಎಂಬ ಪದ ಮತ್ತು ಅಂಕಿಗಳ ಬದಲಿಗೆ “ದಿನಾಂಕ: 31.12.2025ರೊಳಗೆ”, ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ: 01.01.2025 ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು.