ಬೆಂಗಳೂರು : ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳಿಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಫಿಲೆಮನ್ ಯಾಂಗ್ ಮೆಚ್ಚುಗೆ ಸೂಚಿಸಿದ್ದಾರೆ.
ರಾಜ್ಯದಲ್ಲಿ ಮಹಿಳೆಯರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸಮಾನತೆಯನ್ನು ಕಲ್ಪಿಸಲು ಮಹಿಳಾ ಪರ ಕಾರ್ಯಕ್ರಮಗಳು, ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶ್ಲಾಘಿಸಿದ್ದಾರೆ.