ದಾವಣಗೆರೆ : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 25,000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಶಿಕ್ಷಣ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2025-26 ನೇ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ 25 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಬಜೆಟ್ ಅನುಮೋದನೆ ನೀಡಲು ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 13500 ಶಿಕ್ಷಕರ ನೇಮಕಾತಿಗೆ ಆದೇಶ ನೀಡಲಾಗಿದೆ. ಆದರೂ 50 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿಗೆ ಕ್ರಮ ವಹಿಸಲಾಗುತ್ತದೆ ಎಂದರು.
ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯಾದ್ಯಂತ 25,000 ಶಿಕ್ಷಕರು ಸರ್ಕಾರಿ ಶಾಲೆಗಳಲ್ಲಿ ಖಾಲಿ ಹುದ್ದೆಗಳು ತೀವ್ರವಾಗಿ ಕಡಿಮೆಯಾಗುತ್ತವೆ. ಕಲ್ಯಾಣ-ಕರ್ನಾಟಕದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಬಗ್ಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.