ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ.
ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. 45 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ 25 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ರೆ, ಆದರೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿದ್ರೆ, ಸಿಎಂ ಆತಿಶಿ ಕೂಡ ಹಿನ್ನಡೆ ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ದೆಹಲಿಯಲ್ಲಿ ಬಹುಮತ ಪಡೆಯುವುದು ಫಿಕ್ಸ್ ಆಗಿದೆ.
ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಬರಲು ಪ್ರಾರಂಭಿಸಿವೆ. ಟ್ರೆಂಡ್‌ಗಳಲ್ಲಿ, ಭಾರತೀಯ ಜನತಾ ಪಕ್ಷ (ಬಿಜೆಪಿ) ಬಹುಮತ ಪಡೆಯುತ್ತಿರುವಂತೆ ಕಾಣುತ್ತಿದೆ. ದೆಹಲಿಯಲ್ಲಿ ಬಿಜೆಪಿ ತನ್ನ ಮೊದಲ ಗೆಲುವು ಸಾಧಿಸಿದೆ. ವಿಶ್ವಾಸ್ ನಗರ ವಿಧಾನಸಭಾ ಸ್ಥಾನದಿಂದ ಬಿಜೆಪಿ ಗೆದ್ದಿದೆ. ಬಿಜೆಪಿ ಅಭ್ಯರ್ಥಿ ಓಂ ಪ್ರಕಾಶ್ ಶರ್ಮಾ ಇಲ್ಲಿಂದ ಗೆದ್ದಿದ್ದಾರೆ.
ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು 9 ನೇ ಸುತ್ತಿನ ಮತ ಎಣಿಕೆಯಲ್ಲೂ ಹಿನ್ನಡೆ ಸಾಧಿಸಿದ್ದಾರೆ. ಇನ್ನು ಜಂಗ್ಪುರ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿಯ ಮನೀಶ್ ಸಿಸೋಡಿಯಾ ಮುನ್ನಡೆ ಸಾಧಿಸಿದ್ದಾರೆ. ಜಂಗ್‌ಪುರ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮನೀಶ್ ಸಿಸೋಡಿಯಾ, ಬಿಜೆಪಿ ಅಭ್ಯರ್ಥಿ ತರವಿಂದರ್ ಸಿಂಗ್ ಮಾರ್ವಾ ಮತ್ತು ಕಾಂಗ್ರೆಸ್ ಅಭ್ಯರ್ಥಿ ಫರ್ಹಾದ್ ಸೂರಿ ವಿರುದ್ಧ ಆರಂಭಿಕ ಟ್ರೆಂಡ್‌ಗಳ ಪ್ರಕಾರ ಮುನ್ನಡೆಯಲ್ಲಿದ್ದಾರೆ.
ದೆಹಲಿಯ ಎಲ್ಲಾ 70 ಕ್ಷೇತ್ರಗಳಲ್ಲೂ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಈ ಚುನಾವಣೆಯಲ್ಲಿ 699 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದರೆ, 2020 ರ ಚುನಾವಣೆಯಲ್ಲಿ ದೆಹಲಿಯಲ್ಲಿ 668 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಬಾರಿ, 95 ತೃತೀಯ ಲಿಂಗದ ಅಭ್ಯರ್ಥಿಗಳು ಸಹ ಅಭ್ಯರ್ಥಿಗಳಲ್ಲಿ ಸೇರಿದ್ದಾರೆ. ಇಂದು ಮತ ಎಣಿಕೆಯ ನಂತರ 699 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.