ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಪ್ರಕಟವಾಗಿದ್ದು, 27 ವರ್ಷಗಳ ಬಳಿಕ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಗೆಲುವು ಸಾಧಿಸಿದೆ.
ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಭರ್ಜರಿ ಗೆಲುವು ಸಾಧಿಸಿದ್ದು, ಎಎಪಿಯ ಅರವಿಂದ್ ಕೇಜ್ರೀವಾಲ್ ಹೀನಾಯ ಸೋಲನುಭವಿಸಿದ್ದಾರೆ. ಮಾಳವೀಯ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿ ಅಭ್ಯರ್ಥಿ ಸೋಮನಾಥ್ ಭಾರ್ತಿ ಸೋಲನುಭವಿಸಿದ್ದಾರೆ. ಬಿಜೆಪಿಯ ಸತೀಶ್ ಭರ್ಜರಿ ಗೆಲುವು ಸಾಧಿಸಿದ್ದಾರೆ.
ದೆಹಲಿ ಸಿಎಂ ಆತಿಶಿ ಗೆಲುವು ಸಾಧಿಸಿದ್ದರೆ. ಜಂಗ್ಪುರ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿಯ ಮನೀಶ್ ಸಿಸೋಡಿಯಾ ಜಂಗ್‌ಪುರ ವಿಧಾನಸಭಾ ಕ್ಷೇತ್ರದಿಂದ ಸೋಲನುಭವಿಸಿದ್ದಾರೆ. ಮತ್ತೊಂದಡೆ ಮಾಳವೀಯ ನಗರದಲ್ಲಿ ಎಎಪಿ ಅಭ್ಯರ್ಥಿ ಸೋಮನಾಥ್ ಭಾರ್ತಿ ಸೋಲನುಭವಿಸಿದ್ದು, ಬಿಜೆಪಿ ಅಭ್ಯರ್ಥಿ ಸತೀಶ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಘಟಾನುಘಟಿ ನಾಯಕರು ಸೋಲನುಭವಿಸಿದ್ದಾರೆ.
ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. 47 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ 23 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಆದರೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಸೋಲನುಭವಿಸಿದ್ದಾರೆ. ಸಿಎಂ ಆತಿಶಿ ಕೂಡ ಹಿನ್ನಡೆ ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ದೆಹಲಿಯಲ್ಲಿ ಬಹುಮತ ಪಡೆಯುವುದು ಫಿಕ್ಸ್ ಆಗಿದೆ.
ದೆಹಲಿಯ ಎಲ್ಲಾ 70 ಕ್ಷೇತ್ರಗಳಲ್ಲೂ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಈ ಚುನಾವಣೆಯಲ್ಲಿ 699 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದರೆ, 2020 ರ ಚುನಾವಣೆಯಲ್ಲಿ ದೆಹಲಿಯಲ್ಲಿ 668 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಬಾರಿ, 95 ತೃತೀಯ ಲಿಂಗದ ಅಭ್ಯರ್ಥಿಗಳು ಸಹ ಅಭ್ಯರ್ಥಿಗಳಲ್ಲಿ ಸೇರಿದ್ದಾರೆ. ಇಂದು ಮತ ಎಣಿಕೆಯ ನಂತರ 699 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
#WATCH | #DelhiElectionResults | Wife of BJP candidate from the New Delhi assembly constituency Parvesh Verma, Swati Singh Verma says, "Today's victory shows that people have trust in BJP and PM Modi…" pic.twitter.com/YBmOl34Qvz
— ANI (@ANI) February 8, 2025