ತುಮಕೂರು : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಗೆ ವೇಗವಾಗಿ ಬಂದಂತಹ ಕೆಎಸ್ಆರ್ಟಿಸಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಬಳಿ ಆಲ್ಬುರಿನಲ್ಲಿ ನಡೆದಿದೆ.
ಮೃತರನ್ನು ಬಿದರೆಕೆರೆ ಗ್ರಾಮದ ಯೋಗೇಶ್(23), ದಯಾನಂದ್(25) ಎಂದು ತಿಳಿದುಬಂದಿದೆ.ನಿನ್ನೆ ರಾತ್ರಿ ಯೋಗೇಶ್ ಮತ್ತು ದಯಾನಂದ್ ಒಂದೇ ಬೈಕ್‌ನಲ್ಲಿ ಬಿದರೆಕೆರೆ ಕಡೆಯಿಂದ ತುರುವೇಕೆರೆ ಕಡೆಗೆ ತೆರಳುತ್ತಿದ್ದರು. ಈ ವೇಳೆ ತುರುವೇಕೆರೆ ಕಡೆಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಬೈಕ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ಯೋಗೇಶ್ ಮತ್ತು ದಯಾನಂದ ಗ್ಯಾರೇಜ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ ಘಟನಾ ಸ್ಥಳಕ್ಕೆ ನೊಣವಿನಕೆರೆ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದ ಕುರಿತು ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.