ಗದಗ : ಗದಗದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಟಿಪ್ಪರ್ ಹರಿದು 6 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಗದಗ ತಾಲೂಕಿನ ಹರ್ತಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಹರ್ತಿ ಗ್ರಾಮದ ಬಸ್ ನಿಲ್ದಾಣದ ಮುಂದೆ ಈ ದುರ್ಘಟನೆ ನಡೆದಿದ್ದು, ಮೃತ ಬಾಲಕನನ್ನು ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಹಿಂಡಸಗೇರಿ ಗ್ರಾಮದ ಬಾಲಕ ಪ್ರೀತಂ ಹರಿಚನ ಅನ್ನೋ ಬಾಲಕ ಸಾವನ್ನಪ್ಪಿದ್ದಾನೆ.ಈತ ಗದಗ ಜಿಲ್ಲೆಯ ಯತ್ನಳ್ಳಿಗೆ ಆಗಮಿಸಿದ್ದ.
ಈ ವೇಳೆ ಬಸ್ ನಿಲ್ದಾಣದ ಬಳಿ ವೇಗವಾಗಿ ಬಂದಿದ್ದ ಟಿಪ್ಪರ್ ಡಿಕ್ಕಿ ಹೊಡೆದು ಬಾಲಕ ಮೃತಪಟ್ಟಿದ್ದಾನೆ. ಹರ್ತಿ ಗ್ರಾಮಸ್ಥರು ಗದಗ- ಲಕ್ಷ್ಮೇಶ್ವರ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಟೈರ್‌ಗೆ ಬೆಂಕಿ ಹಚ್ಚಿ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದು, RTO ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಘಟನೆ ಕುರಿರು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.