ರಾಯಚೂರು : ರಾಯಚೂರು ಜಿಲ್ಲೆಯ ಲಿಂಗಸೂಗೂರಿನಲ್ಲಿ ಎರಡು ಬೈಕುಗಳ ನಡುವೆ ಬೀಕರ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡು ಒದ್ದಾಡುತ್ತಿದ್ದರು. ಆದರೆ ಅಂಬುಲೆನ್ಸ್ ಸಿಬ್ಬಂದಿ ಬರದ ಹಿನ್ನೆಲೆಯಲ್ಲಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಬೈಪಾಸ್ ರಸ್ತೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ವೇಳೆ ಗಂಭೀರವಾಗಿ ಗಾಯಕೊಂಡು ಇಬ್ಬರು ಬೈಕ್ ಸವಾರರು ರಸ್ತೆಯಲ್ಲಿ ನರಳಾಡಿದ್ದಾರೆ.
ಈ ವೇಳೆ ಘಟನೆ ನಡೆದ ಒಂದುವರೆ ಗಂಟೆ ಬಳಿಕ ಆಂಬುಲೆನ್ಸ್ ಸ್ಥಳಕ್ಕೆ ಬಂದಿದೆ ಸದ್ಯ ಇಬ್ಬರು ಗಾಯಗಳು ಲಿಂಗಸುಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಲಿಂಗಸುಗೂರು ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ