ಕಲಬುರ್ಗಿ : ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ನಷ್ಟ ಅನುಭವಿಸಿದ ಕಾಲೇಜು ಉಪನ್ಯಾಸಕನೊಬ್ಬ ಲಾಡ್ಜ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಉಪನ್ಯಾಸಕನನ್ನು ಚಿಂಚೋಳಿ ತಾಲೂಕಿನ ಲಿಂಗದಳ್ಳಿ ಗ್ರಾಮ ನಿವಾಸಿ ವೀರಶೆಟ್ಟಿ (43) ಎಂದು ತಿಳಿದುಬಂದಿದೆ. ಮೃತ ವೀರಶೆಟ್ಟಿ ಬೀದರ್ ಜಿಲ್ಲೆಯ ಬಸವಕಲ್ಯಾಣದ ತಾಲೂಕಿನಲ್ಲಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಷೇರು ಮಾರುಕಟ್ಟೆಯಲ್ಲಿ ಹಣಹೂಡಿಕೆ ಮಾಡಿ ನಷ್ಟ ಅನುಭವಿಸಿರುವುದಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳ ತಿಳಿಸಿವೆ.ಈ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.