ದಾವಣಗೆರೆ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ತರಲು ಕರುಡು ಸಿದ್ಧಪಡಿಸಿದ್ದು, ಇತ್ತೀಚಿಗೆ ರಾಜ್ಯಪಾಲರಿಗೆ ಅದನ್ನು ಕಳಿಸಲಾಗಿತ್ತು ಆದರೆ ರಾಜ್ಯಪಾಲರು ಅದನ್ನು ವಾಪಸ್ ಕಳುಹಿಸಿದ್ದಾರೆ. ಈ ವಿಚಾರವಾಗಿ ಕಾನೂನು ಸಚಿವ ಎಚ್ ಕೆ ಪಾಟೀಲ್ ಅವರು ರಾಜಪ್ಪರಿಗೆ ತಪ್ಪು ಗ್ರಹಿಕೆ ಆಗಿರಬಹುದು ಎಂದು ತಿಳಿಸಿದರು.
ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಸುಗ್ರೀವಾಜ್ಞೆಯ ಪ್ರಸ್ತಾಪವನ್ನು ಒಪ್ಪಿಲ್ಲ. ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ಗೆ ತಪ್ಪು ಗ್ರಹಿಕೆ ಆಗಿರಬಹುದು.ಆಕ್ಷೇಪ ವ್ಯಕ್ತಪಡಿಸಿದ್ದನ್ನು ಸರಿಪಡಿಸಿ ಮತ್ತೆ ಮಂಡಿಸುತ್ತೇವೆ. ಸುಗ್ರೀವಾಜ್ಞೆ ಬಗ್ಗೆ ಅಧಿಕಾರಿಗಳೇ ಫೀಡ್ ಬ್ಯಾಕ್ ಕೊಟ್ಟಿದ್ದಾರೆ. ರಾಜ್ಯಪಾಲರಿಗೆ ಅಧಿಕಾರಿಗಳೇ ಫೀಡ್ ಬ್ಯಾಕ್ ಕೊಟ್ಟಿದ್ದು ನೋಡಿದ್ದೇನೆ ಆ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಜನಾದೇಶಕ್ಕೆ ತಲೆಬಾಗುತ್ತೇನೆ. ದೆಹಲಿಯಲ್ಲಿ ಬಿಜೆಪಿಗೆ ಗೆಲುವಾಗಿದೆ. ಆಪ್ ಮತ್ತು ನಾವು ಸೋತಿದ್ದೇವೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶ ಬಗ್ಗೆ ವಿಶ್ಲೇಷಣೆ ಆಗಿದೆ. ದೆಹಲಿ ಚುನಾವಣೆಯ ಕುರಿತು ವಿಶ್ಲೇಷಣೆ ಆಗಬೇಕಿದೆ. ಚುನಾವಣೆ ನೀತಿ ಹಾಗೂ ಅಧಿಕಾರಿಗಳ ವರ್ತನೆ ಪ್ರಶ್ನಾರ್ಥಕವಾಗಿದೆ. ಈ ಕುರಿತು ವಿಶ್ಲೇಷಣೆ ಆಗಬೇಕಿದೆ.ಆಪ್, ಕಾಂಗ್ರೆಸ್ ಒಂದಾಗದೇ ಇರುವುದು ಸಹ ಸೋಲಿಗೆ ಒಂದು ಕಾರಣವಾಗಿದೆ ಎಂದು ತಿಳಿಸಿದರು.