ಕೊಪ್ಪಳ : ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಾಳಲಾರದೆ ಅನೇಕ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದೀಗ ಕೊಪ್ಪಳ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಾಳಲಾರದೆ ಅಂಗನವಾಡಿ ಕಾರ್ಯಕರ್ತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ.
ಹೌದು ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಅಂಗನವಾಡಿ ಕಾರ್ಯಕರ್ತೆ ಮಂಜುಳಾ ಆತ್ಮಹತ್ಯೆಗೆ ಯತ್ನಿಸಿರುವ ಮಹಿಳೆ ಎಂದು ಬಂದಿದ್ದು, ಮಂಜುಳಾ ಗಂಗಾವತಿ ಪಟ್ಟಣದ ಅಗಡಿ ಸಂಗಣ್ಣ ಕ್ಯಾಂಪ್ ನಿವಾಸಿ ಎಂದು ತಿಳಿದುಬಂದಿದೆ.
ಮಂಜುಳಾ ವಿವಿಧ ಬ್ಯಾಂಕ್, ಮೈಕ್ರೋ ಫೈನಾನ್ಸ್ ಹಾಗೂ ಖಾಸಗಿಯಾಗಿ ಮಂಜುಳಾ ಸಾಲ ಪಡೆದುಕೊಂಡಿದ್ದರು. ಸುಮಾರು 3 ಲಕ್ಷ ಸಾಲ ಮಾಡಿದ್ದಾರೆ. ಸಾಲಗಾರರ ಕಿರುಕುಳದಿಂದ ಬೆಸೆದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆ ಕುರಿತು ಗಂಗಾವತಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.