ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು ಚಲಿಸುತ್ತಿದ್ದ ಕಾರು ಶಾರ್ಟ್ ಸರ್ಕ್ಯೂಟ್ ನಿಂದ ಏಕಾಏಕಿ ನಡು ರಸ್ತೆಯಲ್ಲೆ ಬೆಂಕಿ ಹೊತ್ತಿಕೊಂಡು ಉರಿದಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಮಾದಾವರ ಎಂಬಲ್ಲಿ ನಡೆದಿದೆ.
ಹೌದು ಶಾರ್ಟ್ ಸರ್ಕ್ಯೂಟ್ ನಿಂದ ಚಲಿಸುತ್ತಿದ್ದ ಕಾರು ಹೊತ್ತಿ ಉರಿದಿದೆ. ಬೆಂಗಳೂರು ಉತ್ತರ ತಾಲೂಕಿನ ಮಾದಾವರ ಬಳಿ ಈ ಒಂದು ಘಟನೆ ನಡೆದಿದೆ.ನಡು ರಸ್ತೆಯಲ್ಲೇ ಕಾರು ಹೊತ್ತಿ ಉರಿದಿರುವ ಹಿನ್ನೆಲೆಯಲ್ಲಿ ಸಂಚಾರದ ದಟ್ಟಣೆ ಉಂಟಾಗಿದೆ. ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿ ಅಗ್ನಿ ಶಾಮಕ ದಳ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ.
ಗೊಲ್ಲರಟ್ಟಿ ರವಿ ಎಂಬವರಿಗೆ ಸೇರಿದ ಕಾರು ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದುಬಂದಿದೆ.ಕಾರಿನಲ್ಲಿ ನೆಲಮಂಗಲಕ್ಕೆ ಮದುವೆ ಕಾರ್ಯಕ್ರಮಕ್ಕೆ ಹೋಗುತ್ತಿದ್ದರು. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಕಾರಿನಲ್ಲಿದ್ದ ಕುಟುಂಬಸ್ಥರು ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.