ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಬಳಿಯ ಬೊಮ್ಮನಹಳ್ಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಬೈಕ್ ಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಕೆಎಸ್ಆರ್ ಟಿಸಿ ಬಸ್ ಹೋಗುತ್ತಿದ್ದ ವೇಳೆ ಬಸ್ ನ ಕೆಳಗೆ ಸಿಲುಕಿ ಬೈಕ್ ಅಪ್ಪಚ್ಚಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.