ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಹತ್ಯೆ ನಡೆದಿದ್ದು, ಕೂಲಿ ಕಾರ್ಮಿಕನೇ ಲಾರಿ ಮಾಲೀಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲಾರಿ ಮಾಲೀಕ ಮೊಹಬೂಬ್ ಎಂಬಾತನನ್ನು ತಮಿಳುನಾಡು ಮೂಲದ ಖಾಲಿಯಾ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಬೆಂಗಳೂರಿನಲ್ಲಿ ಕೆಲಸಕ್ಕೆ ಇದ್ದ ಖಾಲಿಯಾ ಹಾಗೂ ಲಾರಿ ಮಾಲೀಕ ಮೊಹಬೂಬ್ ನಡುವೆ ಜಗಳವಾಗಿದ್ದು, ಈ ವೇಳೆ ಖಾಲಿಯಾ ಮೊಹಬೂಬ್ ನನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.