ಹುಬ್ಬಳ್ಳಿ : ನಟೋರಿಯಸ್ ಆರೋಪಿ ಮಂಜುನಾಥ್ ಅಲಿಯಾಸ್ ಸೈಂಟಿಸ್ಟ್ ಮಂಜ್ಯಾ ಸೇರಿದಂತೆ ಮೂವರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕೊಲೆ, ಸುಲಿಗೆ, ದರೋಡೆ ಸೇರಿದಂತೆ ವಿವಿಧ ಪ್ರಕರಣದಲ್ಲಿ ಬೇಕಾಗಿದ್ದ ಕುಖ್ಯಾತ ಆರೋಪಿ ಸೈಂಟಿಸ್ಟ್ ಮಂಜ್ಯಾ, ಪತ್ನಿ ಮುಸ್ಕಾನ್, ಮಗಳು ಮಾಲಾ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ ತಿಳಿಸಿದರು.
ಗೋಪನಕೊಪ್ಪದ ಶಿವಕಾಲೋನಿಯ ಕುಖ್ಯಾತ ಆರೋಪಿ ಮಂಜುನಾಥ ಸೈಂಟಿಸ್ಟ್ ಮಂಜ್ಯಾ ಬಂಡಾರಿಯನ್ನು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಬಂಧಿಸಲಾಗಿದೆ. ಅಬ್ದುಲಖಾದರ ಕುಂದಗೋಳ ಎಂಬುವರ ಮೇಲೆ ಕೊಲೆಗೆ ಯತ್ನದ ಆರೋಪದ ಮೇಲೆ ಬಂಧಿಸಲಾಗಿದೆ. ಈತನು ಈ ಹಿಂದೆ ಕೊಲೆ, ಕೊಲೆ ಯತ್ನ, ಧರೋಡೆ, ಮನೆಗಳ್ಳತನ, ಹಲ್ಲೆ ಪ್ರಕರಣ, ಎನ್‌ಡಿಪಿಎಸ್ ಪ್ರಕರಣಗಳಲ್ಲಿ ಭಾಗಿಯಾಗಿದ್ದರಿಂದ ಈತನ ಮೇಲೆ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ 30 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದ್ದಾರೆ.