ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯಲ್ಲಿನ ಗುದ್ದಾಟ ಮುಂದುವರೆದಿದೆ. ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಶಾಸಕ ಬಸನಗೌಡ ಯತ್ನಾಳ್ ಬಹಿರಂಗವಾಗಿಯೇ ವಾಕ್ ಸಮರ ನಡೆಸುತ್ತಿದ್ದಾರೆ. ಇದರ ನಡುವೆ ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಬುಲಾವ್ ನೀಡಿದೆ. ಈ ಹಿನ್ನಲೆಯಲ್ಲಿ ತಮ್ಮ ಪ್ರವಾಸ ರದ್ದುಗೊಳಿಸಿ ದೆಹಲಿಗೆ ತೆರಳುತ್ತಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಜನಹಳ್ಳಿಯಲ್ಲಿ ನಡೆಯುತ್ತಿದ್ದಂತ ವಾಲ್ಮೀಕಿ ಕಾರ್ಯಕ್ರಮವೊಂದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತೆರಳುತ್ತಿದ್ದರು. ಈ ವೇಳೆಯಲ್ಲೇ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದರು. ಈ ಹಿನ್ನಲೆಯಲ್ಲಿ ನೆಲಮಂಗಲದಿಂದ ವಾಪಾಸ್ ಆಗಿದ್ದಾರೆ.
ತಮ್ಮ ಕಾರ್ಯಕ್ರಮ ರದ್ದುಗೊಳಿಸಿರುವಂತ ಬಿವೈ ವಿಜಯೇಂದ್ರ ಅವರು, ಬೆಂಗಳೂರಿನಿಂದ ದೆಹಲಿಗೆ ತೆರಳಿದ್ದಾರೆ. ಬಿಜೆಪಿ ಹೈಕಮಾಂಡ್ ಭೇಟಿಯಾಗಲಿರುವಂತ ಅವರು, ರಾಜ್ಯ ರಾಜಕಾರಣದ ಕುರಿತಂತೆ ಚರ್ಚೆ ನಡೆಸುವ ಸಾಧ್ಯತೆ ಇದೆ.
BREAKING : ಹುಬ್ಬಳ್ಳಿಯಲ್ಲಿ ನಟೋರಿಯಸ್ ರೌಡಿಶೀಟರ್ `ಸೈಂಟಿಸ್ಟ್ ಮಂಜ್ಯಾ’ ಸೇರಿ ಮೂವರು ಅರೆಸ್ಟ್.!