ಬೆಂಗಳೂರು : KSRTC ಬಸ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದರೆ. ಘಟನೆಯಲ್ಲಿ ಓರ್ವ ಸವಾರ ಗಾಯಗೊಂಡಿದ್ದ. ಆದರೆ ಚಿಕಿತ್ಸೆ ಫಲಿಸದೇ ಆತ ಕೂಡ ಸಾವನ್ನಪ್ಪಿರುವ ಘಟನೆ ಬೊಮ್ಮನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಒಂದು ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗ್ರಾಮದಲ್ಲಿ ಅಪಘಾತ ನಡೆದಿತ್ತು.
ಅಪಘಾತದಲ್ಲಿ ಈ ವೇಳೆ ಗಾಯಗೊಂಡಿದ್ದ ಬೈಕ್ ಸವಾರ ಕಾಶಪ್ಪ (45) ಚಿಕಿತ್ಸೆ ಫಲಿಸದೇ ಇದೀಗ ಸಾವನಪ್ಪಿದ್ದಾರೆ. ಯಾದಗಿರಿ ಮೂಲದ ಹನುಮಂತ (55) ಘಟನಾ ಸ್ಥಳದಲ್ಲೇ ಮೃತಪಟ್ಟಿದ್ದರು. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಕೆಎಸ್ಆರ್ಟಿಸಿ ಬಸ್ ತೆರಳುತ್ತಿದ್ದ ವೇಳೆ ಬೈಕಿಗೆ ಬಸ್ ಡಿಕ್ಕಿ ಹೊಡೆದಿತ್ತು. KSRTC ಬಸ್ ನ ಕೆಳಗಡೆ ಸಿಲುಕಿ ಬೈಕ್ ನಜ್ಜುಗುಜ್ಜಾಗಿತ್ತು. ಅಪಘಾತದ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.