ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು ಆಸ್ಪತ್ರೆಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿದೆ.
ಹೌದು ಬೇಗೂರು ಬಳಿ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಾಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೇಗೂರು ಗ್ರಾಮದಲ್ಲಿ ಬೈಕ್ನಲ್ಲಿದ್ದ ಚಲಿಸುತ್ತಿದ್ದ ಪೆಮ್ಮನಹಳ್ಳಿ ನಿವಾಸಿ ಕೆಂಪಗಂಗಯ್ಯ (55) ಸಾವನಪ್ಪಿದ್ದಾರೆ. ಆಸ್ಪತ್ರೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿ ಸಾವನ್ನಪ್ಪಿದ್ದಾರೆ.
ಬೇಗೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಕೆಎಸ್ಆರ್ಟಿಸಿ ಬಸ್ ಸಮೇತ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಅಪಘಾತದ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.