ಬೆಂಗಳೂರು : ಇಂದು ಬೆಂಗಳೂರಿನ ಯಲಹಂಕದ ವಾಯು ನೆಲೆಯಲ್ಲಿ 15ನೇ ಆವೃತ್ತಿಯ ಏರ್ ಶೋ 2025 ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಒಂದು ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚಾಲನೆ ನೀಡಿದ್ದು ಡಿಕೆ ಶಿವಕುಮಾರ್ ಸೇನಾ ಮುಖ್ಯಸ್ಥರು ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ. ಹಿರಿಬೆಳೆ ಡಿಸಿಎಂ ಡಿಕೆ ಶಿವಕುಮಾರ್ ಏರ್ ಫೋರ್ಸ್ ನಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗಿದೆ ಎಂದು ತಿಳಿಸಿದರು.
15ನೇ ಆವೃತ್ತಿಯ ಏರಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗದಕ್ಕೆ ಸಂತೋಷವಾಗುತ್ತಿದೆ. ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರ್ ಶೋ 2025 ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಬೆಂಗಳೂರು ಭಾರತದ ಏರ್ ಫೋರ್ಸ್ ನ ರಾಜಧಾನಿ ಇಲ್ಲಿನ ಏರ್ ಫೋರ್ಸ್ ನಲ್ಲಿ ಒಂದು 1.5 ಲಕ್ಷ ಜನರು ಕೆಲಸ ಮಾಡುತ್ತಿದ್ದಾರೆ. ಇದು ಬರೀ ಪ್ರದರ್ಶನವಲ್ಲ ನಮ್ಮ ಭದ್ರತಾ ಸಮರ್ಥ್ಯದ ಪ್ರದರ್ಶನ ಎಂದು ತಿಳಿಸಿದರು.
ಏರ್ ಫೋರ್ಸ್ ನಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗಿದೆ. ಹೆಲಿಕ್ಯಾಪ್ಟರ್ ತಯಾರಿಕೆಯಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ. ಏರ್ ಕ್ರಾಫ್ಟ್ ಅಧ್ಯಯನಕ್ಕೆ ಸಂಬಂಧಿಸಿದ ಅನೇಕ ಕಾಲೇಜು ಮತ್ತು ಸಂಸ್ಥೆಗಳಿವೆ. ಏರ್ ಶೋ ಎಲ್ಲರಿಗೂ ಒಂದು ಉತ್ತಮ ವೇದಿಕೆಯಾಗಲಿದೆ. ಏರೋ ಇಂಡಿಯಾ ಯಶಸ್ಸಿಗೆ ಕಾರಣವಾಗುತ್ತಿರುವ ಎಲ್ಲರನ್ನೂ ಶ್ಲಾಘಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.