ಬೆಂಗಳೂರು : ಬಾಕಿ ಬಿಲ್ ಪಾವತಿ ಮಾಡದೇ ಕಳೆದ ಒಂದೂವರೆ ವರ್ಷದಿಂದ ಕಿರುಕುಳ ನೀಡುತ್ತಿದ್ದಾರೆ. ಇದರಿಂದ 400-500 ಕಿಯೋನಿಕ್ಸ್ ವಂಡರ್ಸ್ಗಳು ಬೇಸತ್ತು ಹೋಗಿದ್ದಾರೆ. ಹಾಗಾಗಿ ಇಂದು ಶಿವಾನಂದ ಸರ್ಕಲ್ ಬಳಿ ಇರುವ ಕಿಯೋನಿಕ್ಸ್ ಸಂಸ್ಥೆ ಬಳಿ ವೆಂಡರ್ಸ್ ಗಳು ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಈ ಕುರಿತಾಗಿ ಸಚಿವ ಪ್ರಿಯಾಂಕ ಖರ್ಗೆ ಪ್ರತಿಕ್ರಿಯೆ ನೀಡಿದ್ದು ಕಿಯೋನಿಕ್ಸ್ ವೆಂಡರ್ಸ್ ಗಳದ್ದು ಯಾಕೋ ಸ್ವಲ್ಪ ಅತಿಯಾಯಿತು ಎಂದು ಕಿಡಿ ಕಾರಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿ ಸರ್ಕಾರದ ಕಾಲದ ಸಿಎಜಿ ರಿಪೋರ್ಟ್ ಬಂದಿದೆ. ನಾವು ವೆಂಡರ್ಸ್ ಗಳ ಪ್ರತಿಭಟನೆಯನ್ನು ಹತ್ತಿಕ್ಕುತಿಲ್ಲ. ನಾವೇನು ಮಾಡಿದ್ದೇವೆ ಅಂತ ಅವರು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ? ಎಂದು ತಿಳಿಯುತ್ತಿಲ್ಲ. ಪ್ರತಿಭಟನೆ ಮಾಡೋದೇ ಆಗಿದ್ರೆ ಬಿಜೆಪಿ ಕಚೇರಿ ಮುಂದೆ ಹೋಗಿ ಅವರು ಪ್ರತಿಭಟನೆ ಮಾಡಬೇಕು. ಅವರಿಂದಾಗಿಯೇ ತಾನೇ ಕೀಯೊನಿಕ್ಸ್ ಗೆ ಪ್ರಾಬ್ಲಮ್ ಆಗಿದ್ದು? ಕಿಯೋನಿಕ್ಸ್ ವೆಂಡರ್ಸ್ ದು ಸ್ವಲ್ಪ ಅತಿಯಾಗಿದೆ ಎಂದು ಕಿಡಿ ಕಾರಿದರು.
ಪ್ರಕರಣ ಹಿನ್ನೆಲೆ?
ಕಿಯೋನಿಕ್ಸ್ ರಾಜ್ಯದಲ್ಲಿ ಸುಮಾರು 48 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. 450 ರಿಂದ 500ಕ್ಕೂ ಹೆಚ್ಚು ಸಣ್ಣ ಉದ್ಯಮಿದಾರರನ್ನು ನಿಗಮದಲ್ಲಿ ವೆಂಡರ್ದಾರರನ್ನಾಗಿ ನೋಂದಾಯಿಸಿಕೊಂಡು ಕಾರ್ಯಾ ನೀರರ್ವಹಿಸುತ್ತಿದೆ. ಆದರೆ 2023ರಲ್ಲಿ ಸರ್ಕಾರ ಬದಲಾದ ತಕ್ಷಣ ವಂಡೆರ್ದಾರರ ಬಿಲ್ಲನ್ನು ತಡೆ ಹಿಡಿದು ನಾನಾ ರೀತಿಯಾಗಿ ಕಿರುಕುಳ ಕೊಡಲು ಪ್ರಾರಂಭಿಸಲಾಗಿದೆ.
3 ರಿಂದ 4 ತಿಂಗಳುಗಳ ಕಾಲ ಅಧಿಕಾರಗಳು ಹಾಗೂ ಸಚಿವರಲ್ಲಿ ನಾವು ಸಂಯಮದಿಂದ ಎಷ್ಟೇ ಕೇಳಿಕೊಂಡರು, ಮನವಿ ಮಾಡಿಕೊಂಡರೂ ಬಿಲ್ ಪಾವತಿ ಮಾಡಿಲ್ಲ. ಈ ಹಿಂದೆ ಮುಖ್ಯ ಕರರ್ಯನಿರ್ವಾಹಕ ಅಧಿಕಾರಿಯಾಗಿ ಕೆಲಸ ಮಾಡುತಿದ್ದ ಸಂಗಪ್ಪರವರು ಕಮಿಷನ್ ರೂಪದಲ್ಲಿ 12% ಲಂಚ ಕೇಳಿ ಕಿರುಕುಳ ಕೊಟ್ಟು, ನಾವು ಲಂಚ ಕೊಡಲು ಒಪ್ಪದೇ ಇದ್ದಾಗ ನಮ್ಮ ಬಿಲ್ ಪಾವತಿ ಮಾಡದೆ ತಡೆಹಿಡಿದಿದ್ದರು.
ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಶಿವಾನಂದ್ ಸರ್ಕಲ್ ಬಳಿ ಕಿಯೋನಿಕ್ಸ್ ವೆಂಡರ್ಸ್ ಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸುವ ಪ್ಲಾನ್ ಮಾಡಿಕೊಂಡಿದ್ದು, ಈ ಮೂಲಕ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಹಾಗಾಗಿ ಕಿಯೋನಿಕ್ಸ್ ಸಂಸ್ಥೆಯ ಮುಂಭಾಗದಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆದಂತೆ ಭದ್ರತೆ ಒದಗಿಸಲಾಗಿದೆ.