ಕೋಲಾರ : ಪೌತಿ ಖಾತೆ ಮಾಡಿಕೊಡಲು ವ್ಯಕ್ತಿಯಯೊಬ್ಬರ ಬಳಿ 20 ಸಾವಿರ ಲಂಚ ಪಡೆಯುವ ಸಂದರ್ಭದಲ್ಲಿ ಎಸಿ ಕಚೇರಿಯ ಕೇಸ್ ವರ್ಕರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕೋಲಾರ ಜಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದಿದೆ.
ಕೋಲಾರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿರುವ ಎಸಿ ಕಚೇರಿಯಲ್ಲಿ 20 ಸಾವಿರ ರೂಪಾಯಿ ಲಂಚ ಪಡೆಯುವಾಗ ಕೋಮಲಾ ಎನ್ನುವ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೋಲಾರ ಉಪ ವಿಭಾಗಾಧಿಕಾರಿ ಕಚೇರಿಯ ಕೇಸ್ ವರ್ಕರ್ ಕೋಮಲಾ ಪೌತಿ ಖಾತೆ ಮಾಡಲು 50 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ವೇಳೆ ಮುಂಗಡವಾಗಿ 20,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಎಸಿ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೇಸ್ ವರ್ಕರ್ ಕೋಮಲಳನ್ನು ಇದೀಗ ವಶಕ್ಕೆ ಪಡೆದು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕೋಲಾರ ಲೋಕಾಯುಕ್ತ ಇನ್ಸ್ಪೆಕ್ಟರ್ ರೇಣುಕಾ ನೇತೃತ್ವದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿದೆ.