ಉತ್ತರ ಪ್ರದೇಶ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವಂತ ಮಹಾ ಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಅನೇಕ ನಾಯಕರು ಪುಣ್ಯ ಸ್ನಾನ ಮಾಡಿದ್ದಾರೆ. ಇಂದು ಪ್ರಯಾಗ್ ರಾಜ್ ಮಹಾ ಕುಂಭಮೇಳದಲ್ಲಿ ಮಾಜಿ ಸಚಿವ ಬಿ ಶ್ರೀರಾಮುಲು ಹಾಗೂ ಅವರ ಪತ್ನಿ ಭಾಗ್ಯಲಕ್ಷ್ಮೀ ಪುಣ್ಯಸ್ನಾನ ಮಾಡಿದರು.
ಹೌದು. ಕಳೆದ ಎರಡು ವಾರಗಳಿಂದ ಸುದ್ದಿಯಲ್ಲಿರುವಂತ ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಇಂದು ತಮ್ಮ ಪತ್ನಿ ಭಾಗ್ಯಲಕ್ಷ್ಮೀ ಜೊತೆಗೂಡಿ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿನ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಪುಣ್ಯ ಸ್ನಾನ ಮಾಡಿದರು.
ಕೆಲ ದಿನಗಳ ಹಿಂದಷ್ಟೇ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಅವರ ಪತ್ನಿ ಪ್ರಯಾಗ್ ರಾಜ್ ಗೆ ತೆರಳಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದರು. ಈಗ ಬಿಜೆಪಿಯ ಬಿ.ಶ್ರೀರಾಮುಲು ಹಾಗೂ ಅವರ ಪತ್ನಿ ಪುಣ್ಯ ಸ್ನಾನ ಮಾಡಿದ್ದಾರೆ.
Shocking News: ಆಸ್ಪತ್ರೆಯಲ್ಲಿ ಸತ್ತಿದ್ದಾನೆಂದು ಊರಿಗೆ ತರುವಾಗ ಬದುಕಿದ ವ್ಯಕ್ತಿ: ಶಾಕ್ ಆದ ಹಾವೇರಿ ಜನರು
‘ಆಧಾರ್’ ಇದ್ರೆ ಸಾಕು 50,000 ರೂ.ಗಳವರೆಗೆ ತ್ವರಿತ ಸಾಲ.! ಈಗಲೇ ಆನ್ ಲೈನ್’ನಲ್ಲಿ ಅರ್ಜಿ ಸಲ್ಲಿಸಿ!