ರಾಯಚೂರು : ರಾಜ್ಯದಲ್ಲಿ ಇತ್ತೀಚಿಗೆ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಚಾಕ್ಲೆಟ್ ಆಸೆ ತೋರಿಸಿ 11 ವರ್ಷದ ಬಾಳಿಕೆಯ ಮೇಲೆ ಅತ್ಯಾಚಾರ ಎಸಗಿರುವ ಘೋರ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ.
ಶಾಲೆಗೆ ಹೋಗಿದ್ದ ಬಾಲಕಿಯನ್ನು ಊಟದ ಬಿಡುವಿನ ವೇಳೆ ಚಾಕೊಲೇಟ್ ಕೊಡಿಸುವುದಾಗಿ ಚಂದ್ರಶೇಖರ್ ಎಂಬ ವ್ಯಕ್ತಿ ಆಮಿಷವೊಡ್ಡಿ, ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.ಘಟನೆ ನಡೆದ ಬಳಿಕ ಸ್ಥಳೀಯರು ಕೊಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಹಟ್ಟಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿ ಚಂದ್ರಶೇಖರರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.