ಬೆಂಗಳೂರು : 2024-25ನೇ ಸಾಲಿನ ಏಪ್ರಿಲ್-ಮೇ 2024ರ 41 ದಿನಗಳ ಬೇಸಿಗೆ ರಜೆ ಅವಧಿಯಲ್ಲಿ ಬರಪೀಡಿತ ಎಂದು ಗುರುತಿಸಲಾಗಿರುವ ಒಟ್ಟು 31 ಜಿಲ್ಲೆಗಳಲ್ಲಿನ 223 ತಾಲ್ಲೂಕುಗಳಲ್ಲಿ 1-8ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪಾಲಿನ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೇಲೆ ಓದಲಾದ ಕ್ರಮಾಂಕ (1)ರಲ್ಲಿ 2024-25ನೇ ಸಾಲಿಗಾಗಿ ಪಂಚಾಯತ್‌ಗಳಿಗೆ ಒದಗಿಸಲಾಗಿರುವ ಹಣದ ವಿವರಗಳಿಗೆ ಸಂಬಂಧಿಸಿದ ಸಂಪುಟಗಳು-1.2.3 ಮತ್ತು 4ರಲ್ಲಿ 2024-25ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಷೋಷಣ ಶಕ್ತಿ ನಿರ್ಮಾಣ ಯೋಜನೆಯನ್ನು ಅನುಷ್ಠಾನ ಮಾಡಲು ವಿವಿಧ ಲೆಕ್ಕ ಶೀರ್ಷಿಕೆಗಳಡಿ ಕೆಳಕಂಡಂತೆ ಅನುದಾನವನ್ನು ಒದಗಿಸಲಾಗಿದೆ.
ಮೇಲೆ ಓದಲಾದ ಕ್ರಮಾಂಕ (2) ರಲ್ಲಿ ಸರ್ಕಾರದ ಆದೇಶದಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ (ಮಧ್ಯಾಹ್ನ ಉಪಹಾರ ಯೋಜನೆಯ) ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗಳಿಗೆ ರಾಜ್ಯ ಯೋಜನೆ ಕ್ಷೀರಭಾಗ್ಯ ಕಾರ್ಯಕ್ರಮದ ಲೆಕ್ಕ ಶೀರ್ಷಿಕೆ: 2202-00-101-0-18 (2202-01-196-1-02-300) 2 : 324 ಗೌರವ ಧನ ರಡಿ ನಿಗದಿಯಾಗಿರುವ ರೂ.30300.00 ಲಕ್ಷಗಳ ಅನುದಾನದಿಂದ 2024-25ನೇ ಸಾಲಿನಲ್ಲಿ ಆಗಸ್ಟ್-2024 ರಿಂದ ಅಕ್ಟೋಬರ್-2024ರ ವರೆಗೆ 03 ತಿಂಗಳ ಅವಧಿಯ ಗೌರವ ಸಂಭಾವನೆವನ್ನು ಪಾವತಿಸಲು ಕೇಂದ್ರದ ಪಾಲಿನ ಅನುದಾನ ರೂ.2039.71 ಲಕ್ಷಗಳು, ರಾಜ್ಯದ ಪಾಲಿನ ಅನುದಾನ ರೂ.1359.80 ಲಕ್ಷಗಳು ಹಾಗೂ ಹೆಚ್ಚುವರಿ ರಾಜ್ಯದ ಪಾಲಿನ ಅನುದಾನ ರೂ.8973.51 ಲಕ್ಷಗಳನ್ನು ಒಳಗೊಂಡಂತೆ ಒಟ್ಟಾರೆಯಾಗಿ ರೂ.12373.02 ಲಕ್ಷಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
ಮೇಲೆ ಓದಲಾದ ಕ್ರಮಾಂಕ (3)ರಲ್ಲಿ ಭಾರತ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಮಂತ್ರಾಲಯದ, ಆದೇಶದಲ್ಲಿ 2024-25ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯನ್ನು (ಮಧ್ಯಾಹ್ನ ಉಪಹಾರ ಯೋಜನೆ) ಅನುಷ್ಠಾನ ಮಾಡಲು ಮೊದಲನೇ ಕಂತಿನಲ್ಲಿ ಆವರ್ತಕ ವೆಚ್ಚಗಳಿಗೆ (Recurring Expenses) ರೂ.12703.63 ಲಕ್ಷಗಳ ಕೇಂದ್ರದ ಪಾಲಿನ ಅನುದಾನವನ್ನು ಬಿಡುಗಡೆ ಮಾಡಿ, ಸದರಿ ಅನುದಾನಕ್ಕೆ ಎದುರಾಗಿ ರೂ.7501.76 ಲಕ್ಷಗಳ ರಾಜ್ಯದ ಪಾಲಿನ ಅನುದಾನವನ್ನು ಬಿಡುಗಡೆ ಮಾಡುವಂತೆ ತಿಳಿಸಲಾಗಿದೆ.
ಮೇಲೆ ಓದಲಾದ ಕ್ರಮಾಂಕ (4)ರಲ್ಲಿ ಸರ್ಕಾರದ ಆದೇಶದಲ್ಲಿ 2024-25ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಷೋಷಣ ಶಕ್ತಿ ನಿರ್ಮಾಣ ಯೋಜನೆಯನ್ನು (ಮಧ್ಯಾಹ್ನ ಉಪಹಾರ ಯೋಜನೆ) ಅನುಷ್ಠಾನ ಮಾಡಲು ಮೊದಲನೇ ಕಂತಿನಲ್ಲಿ ಆವರ್ತಕ ವೆಚ್ಚಗಳಿಗೆ (Recurring Expenses) ರೂ.12703.63 ಲಕ್ಷಗಳ ಕೇಂದ್ರದ ಪಾಲಿನ ಅನುದಾನವನ್ನು ಹಾಗೂ ರೂ.7501.76 ಲಕ್ಷಗಳ ರಾಜ್ಯದ ಪಾಲಿನ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
ಮೇಲೆ ಓದಲಾದ ಕ್ರಮಾಂಕ (5)ರಲ್ಲಿನ ಭಾರತ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಮಂತ್ರಾಲಯದ, ಆದೇಶದಲ್ಲಿ 2024-25ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯನ್ನು (ಮಧ್ಯಾಹ್ನ ಉಪಹಾರ ಯೋಜನೆ) ಅನುಷ್ಠಾನ ಮಾಡಲು ಎರಡನೇ ಕಂತಿನಲ್ಲಿ ಆವರ್ತಕ ವೆಚ್ಚಗಳಿಗೆ (Recurring Expenses) ರೂ.12703.63 ಲಕ್ಷಗಳ ಕೇಂದ್ರದ ಪಾಲಿನ ಅನುದಾನವನ್ನು ಬಿಡುಗಡೆ ಮಾಡಿ, ಸದರಿ ಅನುದಾನಕ್ಕೆ ಎದುರಾಗಿ ರೂ.7501.75 ಲಕ್ಷಗಳ ರಾಜ್ಯದ ಪಾಲಿನ ಅನುದಾನವನ್ನು ಬಿಡುಗಡೆ ಮಾಡುವಂತೆ ತಿಳಿಸಲಾಗಿದೆ.
ಮೇಲೆ ಓದಲಾದ ಕ್ರಮಾಂಕ (6)ರಲ್ಲಿನ ಸರ್ಕಾರದ ಆದೇಶದಲ್ಲಿ, 2024-25ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಷೋಷಣ ಶಕ್ತಿ ನಿರ್ಮಾಣ ಯೋಜನೆಯನ್ನು (ಮಧ್ಯಾಹ್ನ ಉಪಹಾರ ಯೋಜನೆ) ಅನುಷ್ಠಾನ ಮಾಡಲು ಎರಡನೇ ಕಂತಿನಲ್ಲಿ ಆವರ್ತಕ ವೆಚ್ಚಗಳಿಗೆ (Recurring Expenses) ರೂ.12703.63 ಲಕ್ಷಗಳ ಕೇಂದ್ರದ ಪಾಲಿನ ಅನುದಾನವನ್ನು, ಸದರಿ ಅನುದಾನಕ್ಕೆ ಎದುರಾಗಿ ರೂ.7501.75 ಲಕ್ಷಗಳ ರಾಜ್ಯದ ಪಾಲಿನ ಅನುದಾನ ಹಾಗೂ ರಾಜ್ಯ ಸರ್ಕಾರದಿಂದ ಭರಿಸಲಾಗುತ್ತಿರುವ ಅಡುಗೆ ಸಿಬ್ಬಂದಿಗಳ ಹೆಚ್ಚುವರಿ ಸಂಭಾವನೆ ಮೊತ್ತದ ರೂ.7575.00 ಲಕ್ಷಗಳ ರಾಜ್ಯದ ಪಾಲಿನ ಹೆಚ್ಚುವರಿ ಅನುದಾನವನ್ನು (State Top-up Amount) ಒಳಗೊಂಡಂತೆ ಒಟ್ಟಾರೆಯಾಗಿ ರೂ.27780.38 ಲಕ್ಷಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
ಮೇಲೆ ಓದಲಾದ ಕ್ರಮಾಂಕ (7)ರಲ್ಲಿನ ಭಾರತ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಮಂತ್ರಾಲಯದ, ಆದೇಶದಲ್ಲಿ 2024-25ನೇ ಸಾಲಿನಲ್ಲಿ ಬರಪೀಡಿತ ಪ್ರದೇಶಗಳಲ್ಲಿ 1-8ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಉಪಹಾರ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ, ರೂ 2958.87 ಲಕ್ಷಗಳ ಕೇಂದ್ರದ ಪಾಲಿನ ಅನುದಾನವನ್ನು ಬಿಡುಗಡೆ ಮಾಡಿ ಸದರಿ ಅನುದಾನಕ್ಕೆ ಎದುರಾಗಿ ರೂ 1742.74 ಲಕ್ಷಗಳ ರಾಜ್ಯದ ಪಾಲಿನ ಅನುದಾನವನ್ನು ಬಿಡುಗಡೆ ಮಾಡುವಂತೆ ತಿಳಿಸಲಾಗಿದೆ.
ಮೇಲೆ ಓದಲಾದ ಕ್ರಮಾಂಕ (8)ರಲ್ಲಿ ನಿರ್ದೇಶಕರು, ಪ್ರಧಾನ ಮಂತ್ರಿ ಷೋಷಣ ಶಕ್ತಿ ನಿರ್ಮಾಣ ಯೋಜನೆ, ಇವರು 2024-25ನೇ ಸಾಲಿನ ಏಪ್ರಿಲ್-ಮೇ-2024ರ 41 ದಿನಗಳ ಬೇಸಿಗೆ ರಜಾ ಅವಧಿಯಲ್ಲಿ ರಾಜ್ಯದ 31 ಜಿಲ್ಲೆಗಳ ಒಟ್ಟು 223 ಬರಪೀಡಿತ ತಾಲ್ಲುಕುಗಳ ವ್ಯಾಪ್ತಿಯಲ್ಲಿನ 1-8ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಉಪಹಾರ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ. ರೂ.2958.87 ಲಕ್ಷಗಳ ಕೇಂದ್ರದ ಪಾಲಿನ ಅನುದಾನವನ್ನು, ಸದರಿ ಅನುದಾನಕ್ಕೆ ಎದುರಾಗಿ ರೂ.1742.74 ಲಕ್ಷಗಳ ರಾಜ್ಯದ ಪಾಲಿನ ಅನುದಾನವನ್ನು ಹಾಗೂ ರಾಜ್ಯ ಸರ್ಕಾರದಿಂದ ಭರಿಸಲಾಗುತ್ತಿರುವ ಅಡುಗೆ ಸಿಬ್ಬಂದಿಗಳ ಹೆಚ್ಚುವರಿ ಸಂಭಾವನೆ ಮೊತ್ತ 2692.17.مه ಲಕ್ಷಗಳನ್ನು (State Top-up Amount) ಒಳಗೊಂಡಂತೆ ಒಟ್ಟಾರೆಯಾಗಿ ರೂ.7393.78 ಲಕ್ಷಗಳ ಅನುದಾನವನ್ನು ವಿವಿಧ ಲೆಕ್ಕ ಶೀರ್ಷಿಕೆಗಳಡಿ ಬಿಡುಗಡೆ ಮಾಡುವಂತೆ ಕೋರಿರುತ್ತಾರೆ.
ಪ್ರಸ್ತಾವನೆಯಲ್ಲಿ ವಿವರಿಸಲಾದ ಮೇಲ್ಕಂಡ ಅಂಶಗಳನ್ನು ಸರ್ಕಾರವು ಕೂಲಂಕಷವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2024-25ನೇ ಸಾಲಿನ ಏಪ್ರಿಲ್-ಮೇ 2024ರ 41 ದಿನಗಳ ಬೇಸಿಗೆ ರಜೆ ಅವಧಿಯಲ್ಲಿ ಬರಪೀಡಿತ ಎಂದು ಗುರುತಿಸಲಾಗಿರುವ ಒಟ್ಟು 31 ಜಿಲ್ಲೆಗಳಲ್ಲಿನ 223 ತಾಲ್ಲೂಕುಗಳಲ್ಲಿ 1-8ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ, ರೂ.2958.87 ಲಕ್ಷಗಳ ಕೇಂದ್ರದ ಪಾಲಿನ ಅನುದಾನವನ್ನು, ಸದರಿ ಅನುದಾನಕ್ಕೆ ಎದುರಾಗಿ ರೂ.1742.74 ಲಕ್ಷಗಳ ರಾಜ್ಯದ ಪಾಲಿನ ಅನುದಾನ ಹಾಗೂ ರಾಜ್ಯ ಸರ್ಕಾರದಿಂದ ಭರಿಸಲಾಗುತ್ತಿರುವ ಅಡುಗೆ ಸಿಬ್ಬಂದಿಗಳ ಹೆಚ್ಚುವರಿ ಸಂಭಾವನೆ ಮೊತ್ತ ರೂ.2692.17 ಲಕ್ಷಗಳ ರಾಜ್ಯದ ಪಾಲಿನ ಹೆಚ್ಚುವರಿ ಅನುದಾನವನ್ನು (State Top-up Amount) ಒಳಗೊಂಡಂತೆ ಒಟ್ಟಾರೆಯಾಗಿ ರೂ.7393.78 ಲಕ್ಷಗಳ ಅನುದಾನವನ್ನು ವಿವಿಧ ಲೆಕ್ಕ ಶೀರ್ಷಿಕೆಗಳಡಿ ಕೆಳಕಂಡಂತೆ ಬಿಡುಗಡೆ ಮಾಡಿ ಆದೇಶಿಸಿದೆ.