ಶಿವಮೊಗ್ಗ : ಅಕ್ರಮ ಮರಳು ದಂಧೆ ತಡೆಯಲು ಹೋದ ಗಣಿ ಮತ್ತು ಭೂವಿಜ್ಞಾನದ ಮಹಿಳಾ ಅಧಿಕಾರಿ ವಿರುದ್ಧ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಶಾಸಕ ಬಿಕೆ ಸಂಗಮೇಶ್ ಪುತ್ರ ಅತ್ಯಂತ ಕೆಟ್ಟ ಪದಗಳಿಂದ ಬೈದು ನಿಂದಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಧಿಕಾರಿ ಜ್ಯೋತಿ ಅವರು ಶಾಸಕ ಪುತ್ರ ಬಸವೇಶ್ ವಿರುದ್ಧ ದೂರು ನೀಡಿದ್ದಾರೆ.
ಹೌದು ಶಾಸಕನ ಪುತ್ರನಿಂದ ಮಹಿಳಾ ಅಧಿಕಾರಿಗೆ ನಿಂದನೆ ಆರೋಪದ ಹಿನ್ನೆಲೆಯಲ್ಲಿ ಬಸವೇಶ್ ವಿರುದ್ಧ ಮಹಿಳಾ ಅಧಿಕಾರಿ ಜ್ಯೋತಿ ದೂರು ನೀಡಿದ್ದಾರೆ. ಶಿವಮೊಗ್ಗದ ಎಸ್ಪಿ ಕಚೇರಿಗೆ ಬಂದು ಮಹಿಳಾ ಅಧಿಕಾರಿ ಜ್ಯೋತಿ ದೂರು ನೀಡಿದ್ದಾರೆ. ನಿಂದನೆ ಬಗ್ಗೆ ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ಗೆ ದೂರು ಸಲ್ಲಿಸಿದ್ದಾರೆ.ಶಿವಮೊಗ್ಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವಿಜ್ಞಾನಿ ಜ್ಯೋತಿ ಅವರು ಅಕ್ರಮ ಮರಳು ದಂಧೆ ತಡೆಯಲು ನಿನ್ನೆ ಕಾರ್ಯಾಚರಣೆ ನಡೆಸಲು ತೆರಳಿದ್ದ ವೇಳೆ ಫೋನ್ ಮಾಡಿ ಬಸವೇಶ್ ನಿಂದನೆ ಮಾಡಿದ್ದ.
ಘಟನೆ ಹಿನ್ನೆಲೆ?
ಸಂಗಮೇಶ್ ಪುತ್ರ ಬಸವೇಶ್ ಮಹಿಳಾ ಅಧಿಕಾರಿ ಜ್ಯೂತಿ ಎಂಬವರಿಗೆ ಅವಾಚ್ಯವಾಗಿ ಬಾಯಿಗೆ ಬಂದಂತೆ ಬೈದಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಭದ್ರಾ ನದಿತಟದಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ ಮೇಲೆ ಗಣಿ ಇಲಾಖೆಯ ವಿಜ್ಞಾನಿ ಜ್ಯೋತಿ ಕಳೆದ ರಾತ್ರಿ ದಾಳಿ ಮಾಡಿದ್ದರು. ಈ ವೇಳೆ ನಡೆದ ಘಟನೆಯ ವಿಡಿಯೋ ವೈರಲ್ ಆಗಿದೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಮಹಿಳಾ ಅಧಿಕಾರಿಯ ಜ್ಯೋತಿ ಅವರು ಎಸ್ಪಿ ಕಚೇರಿಗೆ ದೂರು ಸಲ್ಲಿಸಿದ್ದಾರೆ.