ಮೈಸೂರು: ನಗರದಲ್ಲಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ, ಠಾಣೆಯ ಮುಂದೆ ಇದ್ದಂತ ವಾಹನಗಳಿಗೆ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದರು. ಈ ಹಿನ್ನಲೆಯಲ್ಲಿ ಪೊಲೀಸ್ ಠಾಣೆಯ ಸುತ್ತಮುತ್ತ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ. ಅಲ್ಲದೇ ಸ್ಥಳಕ್ಕೆ ಆಗಮಿಸಿರುವಂತ ಆರ್ ಟಿ ಓ ಅಧಿಕಾರಿಗಳು ಸುಟ್ಟು ಕರಕಲಾಗಿರುವಂತ ವಾಹನಗಳನ್ನು ಮಹಜರ್ ನಡೆಸುತ್ತಿದ್ದಾರೆ.
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಠಾಣೆಯ ಮುಂದೆ ಇದ್ದಂತ ಹಲವು ವಾಹನಗಳು ಸುಟ್ಟು ಕರಕಲಾಗಿದ್ದವು. ಠಾಣೆಯ ಮೇಲೂ ಬೆಂಗಳೂರಿನ ಡಿಜಿ ಹಳ್ಳಿಯ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದಂತೆ ಕಲ್ಲು ತೂರಾಟ ನಡೆಸಲಾಗಿತ್ತು. ಸದಸ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.
ಉದಯಗಿರಿ ಪೊಲೀಸ್ ಠಾಣೆಯ ಬಳಿಯಲ್ಲಿ ಬಿಗುವಿನ ವಾತಾವರಣವಿದ್ದು, ಅಘೋಷಿತ ಬಂದ್ ನಿರ್ಮಾಣವಾಗಿದೆ. ರಸ್ತೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದು, ಸಾರ್ವಜನಿಕರ ಸಂಚಾರಕ್ಕೂ ನಿರ್ಬಂಧ ವಿಧಿಸಿದ್ದಾರೆ.
ಇದರ ನಡುವೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಗೆ ಆರ್ ಟಿ ಓ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಠಾಣೆಯ ಮುಂದೆ ನಿಲ್ಲಿಸಲಾಗಿದ್ದಂತ ವಾಹನಗಳಿಗೆ ಬೆಂಕಿ ಹಚ್ಚಿದರ ಬಗ್ಗೆ ಮಹಜರ್ ಕಾರ್ಯದಲ್ಲಿ ತೊಡಗಿದ್ದಾರೆ. ಡ್ಯಾಮೇಜ್ ಆದಂತ ವಾಹನಗಳ ಮಹಜರ್ ಅನ್ನು ಮಾಡುತ್ತಿರೋದಾಗಿ ತಿಳಿದು ಬಂದಿದೆ.
ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್: ವಸತಿ ಶಾಲೆ ತೆರೆಯಲು ಸರ್ಕಾರ ತೀರ್ಮಾನ