ಬೆಂಗಳೂರು: ಗ್ರಾಮಾಂತರ ಜಿಲ್ಲೆಯಲ್ಲಿ ಮದುವೆಯನ್ನು ಹುಡುಗಿ ಮನೆಯವರ ಕಡೆಯವರು ಕ್ಯಾನ್ಸಲ್ ಮಾಡಿದ್ದಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉತ್ತರ ತಾಲ್ಲೂಕಿನ ದೊಂಬರಹಳ್ಳಿಯಲ್ಲಿ ಬಾಗಲಕೋಟೆ ಮೂಲದ ಯುವಕ ಸಿದ್ದಲಿಂಗಯ್ಯ(29) ಎಂಬಾತನೇ ಆತ್ಮಹತ್ಯೆಗೆ ಶರಣಾದಂತ ವ್ಯಕ್ತಿಯಾಗಿದ್ದಾನೆ.
ಬಾಗಲಕೋಟೆ ಮೂಲದ ಯುವತಿ ಜೊತೆಗೆ ಮದುವೆ ನಿಶ್ಚಯವಾಗಿತ್ತು. 15 ದಿನಗಳ ಹಿಂದಷ್ಟೇ ಮದುವೆ ನಿಶ್ಚಯವಾಗಿತ್ತು. ಆದರೇ ವಯಸ್ಸಿನ ಕಾರಣವೊಡ್ಡಿ ಯುವತಿಯ ಕಡೆಯವರು ಮದುವೆ ಕ್ಯಾನ್ಸಲ್ ಮಾಡಿದ್ದರು. ಇದರಿಂದ ಮನನೊಂದು ಮನೆಯಲ್ಲಿದ್ದಂತ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮೃತ ಸಿದ್ದಲಿಂಗಯ್ಯ ದೇಹವನ್ನು ನೆಲಮಂಗಲದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಪೋಷಕರಿಗೆ ಒಪ್ಪಿಸಲಾಗಿದೆ.
ಕರ್ನಾಟಕ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಆರಂಭ: ಈ ವಲಯಗಳಲ್ಲಿ ಹೂಡಿಕೆ